ಗಾಯಕ ಸಿಧು ಮೂಸೆವಾಲಾ ಹಂತಕ ಗೋಲ್ಡಿ ಅಮೆರಿಕಾದಲ್ಲಿ ಸೆರೆ..!

ನವದೆಹಲಿ,ನ.2- ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಗ್ಯಾಂಗ್‍ಸ್ಟರ್ ಗೋಲ್ಡಿ ಬ್ರಾರ್‍ನನ್ನು ಅಮೆರಿಕಾದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಗ್ಯಾಂಗ್‍ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನ ಸದಸ್ಯ ಗೋಲ್ಡಿ ಬ್ರಾರ್ ಇತ್ತೀಚೆಗೆ ಕೆನಡಾದಿಂದ ಅಮೆರಿಕಾಕ್ಕೆ ಬಂದು ನೆಲೆಸಿದ್ದು, ಕೆಲ ದಿನಗಳ ಹಿಂದಷ್ಟೆ ಆತನನ್ನು ಕ್ಯಾಲಿಫೋರ್ನಿಯಾ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಗೋಲ್ಡಿಬ್ರಾರ್ ಬಂಧನ ಕುರಿತಂತೆ ಅಮೆರಿಕಾದಿಂದ ಭಾರತಕ್ಕೆ ಯಾವುದೇ ಅಧಿಕೃತ ಮಾಹಿತಿ ರವಾನೆಯಾಗಿಲ್ಲ ಎಂದು ಮೂಲಗಳು ವಿವರಿಸಿವೆ. ಮೂಸೆವಾಲಾ ಹತ್ಯೆಯ ಜವಾಬ್ದಾರಿಯನ್ನು […]