ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಠಗಳಿಗೆ ಫುಲ್ ಡಿಮ್ಯಾಂಡ್

ಬೆಂಗಳೂರು,ಆ.5- ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಧಾರ್ಮಿಕ ಶಕ್ತಿ ಕೇಂದ್ರಗಳಾದ ಮಠಮಾನ್ಯಗಳಿಗೆ ಎಲ್ಲಿಲ್ಲದ ಬೇಡಿಕೆ ಬರುತ್ತಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಪ್ರತಿಯೊಂದು ರಾಜಕೀಯ ಪಕ್ಷಗಳು ಈಗ ಮಠಗಳಿಗೆ ಎಡತಾಗುತ್ತಿದ್ದು, ಈ ನಿಟ್ಟಿನಲ್ಲಿ ಈಗ ರಾಜ್ಯದ ಪ್ರಮುಖ ಲಿಂಗಾಯತ ಮಠಾೀಧಿಶರನ್ನ ನೇರವಾಗಿ ಭೇಟಿ ಮಾಡಿ ವಿಶ್ವಾಸಗಳಿಸುವ ಮತ್ತೊಂದು ಹೊಸದಾದ ಚುನಾವಣೆ ಕಸರತ್ತು ಆರಂಭಿಸಿವೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರ ಅಸಮಾಧಾನಗೊಂಡಿರುವ ಲಿಂಗಾಯತ ಸಮುದಾಯದ ಬೆಂಬಲ ಪಡೆಯಲು ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿನ ಸುತ್ತೂರು, […]