ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ
ಹೊಸದಿಲ್ಲಿ, ಸೆ.1 (ಪಿಟಿಐ)- ಇಲ್ಲಿನ ಸಫ್ದರ್‍ಜಂಗ್ ಆಸ್ಪತ್ರೆಯ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯ ನಿವಾಸಿಯಾಗಿರುವ ವಿದ್ಯಾರ್ಥಿನಿ ಸಫ್ದರ್‍ಜಂಗ್ ಆಸ್ಪತ್ರೆಯ ಎಂಬಿಬಿಎಸ್ ಬಾಲಕಿಯರ ಹಾಸ್ಟೆಲ್‍ನಲ್ಲಿದ್ದುಕೊಂಡು ಎಂಬಿಬಿಸ್ ಇಂಟರ್ನ್‍ಶಿಪ್ ಮಾಡುತ್ತಿದ್ದರು. ಇಂದು ಮುಂಜಾನೆ ಆಕೆ ಹಾಸ್ಟೆಲ್‍ನ ಕೊಠಡಿಯಲ್ಲಿ ಸ್ಕಾರ್ಫ್‍ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಉಪ ಆಯುಕ್ತ (ನೈಋತ್ಯ) ಮನೋಜ್ ಸಿ ತಿಳಿಸಿದ್ದಾರೆ. ಕೋಣೆಗೆ ಒಳಗಿನಿಂದ ಬೀಗ ಹಾಕಲಾಗಿತ್ತು ಮತ್ತು ಅದನ್ನು ಆಕೆಯ ಸ್ನೇಹಿತರು ಬಲವಂತವಾಗಿ ತೆರೆದರು.ವಿದ್ಯಾರ್ಥಿನಿಯನ್ನು ಆಸ್ಪತ್ರೆಯ […]