H3N2 ವೈರಸ್ ಬಗ್ಗೆ ಅನಗತ್ಯ ವದಂತಿ ಹಬ್ಬಿಸಬೇಡಿ : ಸಚಿವ ಸುಧಾಕರ್

ಬೆಂಗಳೂರು,ಮಾ.6- ರಾಜ್ಯಾದ್ಯಂತ ಆತಂಕ ಸೃಷ್ಟಿಸಿರುವ ಹೆಚ್3ಎನ್2 ಸೋಂಕು ಸದ್ಯಕ್ಕೆ ಅಪಾಯಕಾರಿಯಾಗಿ ಪರಿಣಮಿಸಿಲ್ಲ. ಆದರೂ ನಾವು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಸಾರ್ವಜನಿಕರು ಕೂಡ ಮೈಮರೆಯದೆ ಎಚ್ಚರಿಕೆಯಿಂದ ಇರಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಹೆಚ್3ಎನ್2 ಸೋಂಕು ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ತಜ್ಞರ ಜೊತೆಗೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸೋಂಕಿನ ಬಗ್ಗೆ ಕೆಲವರು ಅನಗತ್ಯ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ರಾಜ್ಯದಲ್ಲಿ ಇದು ಕೈ ಮೀರು […]

ಜೈಲುಗಳಲ್ಲಿ ಅಕ್ರಮ ತಡೆಯಲು ಕಠಿಣ ಕ್ರಮ : ಗೃಹ ಸಚಿವ ಜ್ಞಾನೇಂದ್ರ

ಬೆಂಗಳೂರು,ಜ.20- ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವ ಹಾಗೂ ಕುಮ್ಮಕ್ಕು ನೀಡುವ ಕಾರಾಗೃಹ ಸಿಬ್ಬಂದಿ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ರಾಮನಗರ, ತುಮಕೂರು, ಕಲಬುರಗಿ ಹಾಗೂ ಬೆಳಗಾವಿ ಕಾರಾಗೃಹಗಳಲ್ಲಿ ಕೆಲವು ಅಕ್ರಮ ಚಟುವಟಿಕೆಗಳ ಬಗ್ಗೆ ವರದಿಯಾಗಿದ್ದು, ಇದರ ಬಗ್ಗೆ ವಿಸ್ತೃತ ತನಿಖೆಗೆ ಆದೇಶ ನೀಡಿದ್ದು, ತುಮಕೂರು ಜಿಲ್ಲಾ ಕಾರಾಗೃಹದ ವಾರ್ಡನ್ ಪ್ರವೀಣ್ ಎಂಬುವವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಹೇಳಿದರು. ಹಾಸನ ಜಿಲ್ಲಾ ಕಾರಾಗೃಹದ ಮೇಲೆ […]

ದೀಪಾವಳಿ ವೇಳೆ ಅಗ್ನಿ ಅವಘಡ ತಡೆಯಲು ಮುಂಜಾಗ್ರತಾ ಕ್ರಮಗಳ ಸುತ್ತೋಲೆ

ಬೆಂಗಳೂರು, ಅ.21- ದೀಪಾವಳಿಯ ಸಂದರ್ಭದಲ್ಲಿ ಯಾವುದೇ ಅಗ್ನಿ ಅನಾಹುತಗಳು ಮತ್ತು ದುರ್ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಸುತ್ತೋಲೆ ರವಾನಿಸಿದೆ. ಪಟಾಕಿ ಮಾರಾಟ, ದಾಸ್ತಾನು ಮತ್ತು ಬಳಕೆಯ ಸಂದರ್ಭದಲ್ಲಿ ಮಾರ್ಗಸೂಚಿಗಳನ್ನು ಪಾಲಿಸಬೇಕು, ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಎಚ್ಚರಿಸಲಾಗಿದೆ. ಪಟಾಕಿಗಳ ಮಾರಾಟಕ್ಕೆ ಜನನಿಬಿಡ ಮತ್ತು ವಾಣಿಜ್ಯ ಸಂಕೀರ್ಣಗಳಲ್ಲಿ ಅವಕಾಶ ನೀಡಬಾರದು. ವಾಹನಗಳ ಸಂಚಾರಕ್ಕೆ ಕಷ್ಟವಾಗುವಂತಹ ಕಿರಿದಾದ ರಸ್ತೆಗಳನ್ನು ಹೊಂದಿರುವ ಸ್ಥಳಗಳಲ್ಲಿ ಪಟಾಕಿ ಮಾರಾಟ ಮಳಿಗೆಗಳಿರಬಾರದು. ಖಾಯಂ ಅಂಗಡಿ ಅಥವಾ ಕಟ್ಟಡಗಳಲ್ಲಿ […]

ಭಾರೀ ಮಳೆಯಿಂದ ಹೊಲ-ಗದ್ದೆ ಜಲಾವೃತ, ಕಂಗಾಲಾದ ರೈತ

ಬೆಂಗಳೂರು,ಆ.9- ಕರಾವಳಿ, ಮಲೆನಾಡು ಹೊರತುಪಡಿಸಿ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಮಳೆ ಅಬ್ಬರ ತಗ್ಗಿದೆ. ಆದರೆ ಬಹುತೇಕ ಕೆರೆಕಟ್ಟೆ, ನದಿ, ಜಲಾಶಯಗಳು ಭರ್ತಿಯಾಗಿರುವುದರಿಂದ ನದಿಪಾತ್ರದಲ್ಲಿ ಪ್ರವಾಹ ಉಂಟಾಗಿ, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆಯ ತುಂಬಳ್ಳಿಪುರದಲ್ಲಿ ಕಾಫಿ ತೋಟ ನಾಶವಾಗಿದೆ. ಕೊಪ್ಪ-ಶೃಂಗೇರಿ ಹೆದ್ದಾರಿಯ ಉಳುಮೆ ಎಂಬಲ್ಲಿ ಬಿರುಕು ಕಾಣಿಸಿಕೊಂಡು ಕುಸಿಯುವ ಭೀತಿ ಎದುರಾಗಿದೆ. ರಾಯಚೂರು, ಕಲಬುರಗಿಯಲ್ಲಿ ಅತಿವೃಷ್ಟಿ ಉಂಟಾಗಿದೆ. ಭದ್ರಾವತಿ ತಾಲ್ಲೂಕಿನ ಕಾಚಿಗೊಂಡನಹಳ್ಳಿಯಲ್ಲಿ ಮನೆ […]