ವೈದ್ಯಕೀಯ ವಿವಿಯ ಸಿಬ್ಬಂದಿಗೆ ದಿನಕ್ಕೆ 3 ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

ಬೆಂಗಳೂರು,ಫೆ.3- ರಾಜ್ಯದ ಪ್ರತಿಯೊಂದು ವೈದ್ಯಕೀಯ ಮಹಾವಿದ್ಯಾಲಯ, ಕಾಲೇಜು ಮತ್ತು ಸಂಸ್ಥೆಗಳಲ್ಲಿ ಒಂದು ದಿನಕ್ಕೆ ಮೂರು ಬಾರಿ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿಯೇ ಇರುವುದಿಲ್ಲ. ತಮ್ಮ ಕೆಲಸದ ಅವಧಿಯಲ್ಲಿ ಬೇರೆ ಕಡೆಗೆ ಹೋಗಿ ಕೆಲಸ ಮಾಡುತ್ತಾರೆ ಎಂಬ ಬಗ್ಗೆ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವೈದ್ಯಕೀಯ ಮಹಾವಿದ್ಯಾಲಯಗಳು, ಕಾಲೇಜುಗಳು […]