ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತಮಿಳುನಾಡಿನ ಒಪ್ಪಿಗೆ ಅಗತ್ಯವಿಲ್ಲ: ಹೆಚ್‌ಡಿಕೆ

ಬೆಂಗಳೂರು,ಮಾ.9-ರಾಜಧಾನಿ ಬೆಂಗಳೂರ ಸೇರಿದಂತೆ ಭಾಗಗಳಲ್ಲಿ ಕುಡಿಯುವ ನೀರಿನ ಯೋಜನೆಯಾದ ಮೇಕೆದಾಟು ನದಿನೀರು ಯೋಜನೆಯನ್ನು ತಮಿಳುನಾಡಿನ ಒಪ್ಪಿಗೆ ಇಲ್ಲದೆ ರಾಜ್ಯ ಸರ್ಕಾರ ಇಚ್ಛಾಸಕ್ತಿ ಪ್ರದರ್ಶಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಈ ಯೋಜನೆಯನ್ನು ಅನುಷ್ಠಾನ ಮಾಡಲು ತಮಿಳುನಾಡು ಇಲ್ಲವೇ ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಅಗತ್ಯವಿಲ್ಲ. ಪರಿಸರ ಇಲಾಖೆಯಿಂದ ಒಪ್ಪಿಗೆ ಪಡೆದು ಯೋಜನೆಯನ್ನು ಅನುಷ್ಠಾನ ಮಾಡಬೇಕು. ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ ಅವರು ಹೆಚ್ಚಿನ ಶ್ರಮ ವಹಿಸಿದರೆ ಇದು ಸಾಧ್ಯ ಎಂದು ಸಲಹೆ […]

ಮೇಕೆದಾಟು ವಿಚಾರ : ಸರ್ಕಾರದ ವಿರುದ್ಧ ಡಿಕೆಶಿ ವಾಗ್ದಾಳಿ

ಕನಕಪುರ, ಮಾ. 7- ಮೇಕೆದಾಟು ಅಣೆಕಟ್ಟು ನಿರ್ಮಾಣದ ವಿಷಯದಲ್ಲಿ ಕೇಂದ್ರ ನೀರಾವರಿ ಸಚಿವ ಶೇಖಾವತ್‍ರವರು ಎರಡು ರಾಜ್ಯಗಳು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಿ ಎಂದು ಹೇಳುತ್ತಿರುವುದು ಆಶಾಸ್ಪದವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವರ ಹೇಳಿಕೆಗೆ ನಮ್ಮ ಮುಖ್ಯಮಂತ್ರಿಗಳು ಮೌನ ವಹಿಸಿರುವುದು ಯಾವ ನ್ಯಾಯ ಇವರ ಕೈಯಲ್ಲಿ ಮೇಕೆದಾಟು ವಿಚಾರವನ್ನು ಬಗೆಹರಿಸಲಾಗದಿದ್ದಲ್ಲಿ ರಾಜೀನಾಮೆಯನ್ನು ನೀಡಲಿ ಎಂದು ಆಗ್ರಹಿಸಿದರು. ತಮಿಳುನಾಡು ಸರ್ಕಾರ ಮೇಕೆದಾಟು ವಿಚಾರದಲ್ಲಿ ಯಾವುದೇ ಸಂಧಾನಕ್ಕೂ ಬರುವುದಿಲ್ಲ ಹಾಗಾಗಿ ಈ ವಿಚಾರ […]

ಮೇಕೆದಾಟು ಯೋಜನೆಗೆ ಅನುದಾನ ಘೋಷಿಸಿ ಕಾಂಗ್ರೆಸ್ ಬಾಯಿ ಮುಚ್ಚಿಸಿತಾ ಬಿಜೆಪಿ..!?

ಬೆಂಗಳೂರು,ಮಾ.7- ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸಿದ್ದ ಮೇಕೆದಾಟು ಪಾದಯಾತ್ರೆಯನ್ನು ಅತ್ಯಂತ ವ್ಯವಸ್ಥಿತವಾಗಿ ವಿಫಲಗೊಳಿಸುವ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡಿದೆ. ಕನಕಪುರದ ಮೇಕೆದಾಟು ಸಂಗಮದಿಂದ ಕಾಂಗ್ರೆಸ್ ಎರಡು ಹಂತದಲ್ಲಿ ಪಾದಯಾತ್ರೆ ನಡೆಸಿದ್ದು, ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿತ್ತು.ಯೋಜನೆಯ ತಡೆಗೆ ತಮಿಳುನಾಡಿನ ಅರ್ಜಿ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆಯಲ್ಲಿದೆ ಹಾಗೂ ಕೇಂದ್ರ ಸರ್ಕಾರದ ಪರಿಸರ ಇಲಾಖೆ ಪರವಾನಗಿ ಸಿಗದೆ ಯೋಜನೆಯ ಅನುಷ್ಠಾನಕ್ಕೆ ಹಿಂದೇಟು ಉಂಟಾಗುತ್ತಿದೆ. ಬಜೆಟ್‍ನಲ್ಲಿ ಹಣ ಮೀಸಲಿಡದಿದ್ದರೆ ಅಧಿವೇಶನದಲ್ಲಿ ಈ ವಿಷಯವಾಗಿ ಗಂಭೀರ ಚರ್ಚೆಯ ಬಗ್ಗೆ […]

ಮೇಕೆದಾಟು ಯೋಜನೆ ಜಾರಿಯಾಗಬಾರದು : ಸಂವಾದ ಕಾರ್ಯಕ್ರಮ

ಬೆಂಗಳೂರು, ಜ.14- ಪರಿಸರ ಉಳಿವಿಗಾಗಿ ಮೇಕೆದಾಟು ಯೋಜನೆಯ ಜಾರಿಯಾಗಬಾರದು ಎಂದು ಪರಿಸರ ಸಂರಕ್ಷಣಾ ಸಮಿತಿಯಿಂದ ಪ್ರೆಸ್ ಕ್ಲಬ್ ಆವರಣದಲ್ಲಿ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಸಂವಾದದಲ್ಲಿ ಭಾಗವಹಿಸಿದ್ದರು. ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಮಾತನಾಡುತ್ತಾ ಮೇಕೆದಾಟು ಪರವಾಗಿದ್ದೇವೆ ಆದರೆ ಅಲ್ಲಿ ಕಟ್ಟುವ ಡ್ಯಾಮಿಗೆ ನಮ್ಮ ವಿರೋಧ ಇದೆ . ಭೂಮಿಯ ಮೇಲೆ ಸ್ವತಂತ್ರವಾಗಿ ನಿರ್ಭೀತಿಯಿಂದ ಜೀವಿಸುವ ಹಕ್ಕು ಸಕಲ ಜೀವರಾಶಿಗಳಿಗೂ ಇದೆ. ಆಣೆಕಟ್ಟು ನಿರ್ಮಾಣವಾದರೆ […]

ಬಿಟ್ಟಿ ಪ್ರಚಾರಕ್ಕೆ ಪಾದಯಾತ್ರೆ: ನಂದಿನಿಗೌಡ ಆರೋಪ

ಬೆಂಗಳೂರು,ಜ.4- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಮೇಕೆದಾಟು ಅಣೆಕಟ್ಟು ಯೋಜನೆಗೆ ಡಿಪಿಆರ್ ತಯಾರಿಸಿ, ಕೇಂದ್ರ ಸರ್ಕಾರದ ಅನುಮೋದನೆಗೆ ಕಳುಹಿಸಿದ್ದಾರೆ. ಅನುಮೋದನೆ ಸಿಕ್ಕ ಕೂಡಲೇ ಯೋಜನೆ ಅನುಷ್ಠಾನಗೊಳ್ಳಲಿದೆ. ಈ ಲಾಭ ಬಿಜೆಪಿಗೆ ಆಗಲಿದೆ ಎಂಬ ದುರುದ್ದೇಶದಿಂದ ಡಿ.ಕೆ ಶಿ.ವಕುಮಾರ್ ಬಿಟ್ಟಿ ಪ್ರಚಾರಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ರಾಮನಗರ ಜಿಲ್ಲಾ ಭಾರತೀಯ ಜನತಾ ಪಕ್ಷ ಉಪಾಧ್ಯಕ್ಷರಾದ ನಂದಿನಿ ಗೌಡ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು , ಡಾ.ನಂಜುಂಡಪ್ಪ ಅವರ ವರದಿಯಂತೆ, ಕನಕಪುರ ತಾಲ್ಲೂಕು ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದಿದೆ. […]