ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವ ಇಚ್ಛಾಶಕ್ತಿ ಬಿಜೆಪಿಗಿಲ್ಲ : ಸುರ್ಜೆವಾಲಾ ವಾಗ್ದಾಳಿ
ಬೆಂಗಳೂರು, ಫೆ.27- ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವ ಇಚ್ಛಾಶಕ್ತಿ ಬಿಜೆಪಿ ಸರ್ಕಾರಕ್ಕಿಲ್ಲ. ಇದಕ್ಕಾಗಿ ನಾವು ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಮುಖಂಡ ರಣದೀಪ್ಸಿಂಗ್ ಸುರ್ಜೆವಾಲಾ ಹೇಳಿದರು. ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಕಾಂಗ್ರೆಸ್ ಕೈಗೊಂಡಿರುವ ಎರಡನೆ ಹಂತದ ಪಾದಯಾತ್ರೆಗೆ ರಾಮನಗರದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕಾವೇರಿ ನಮ್ಮ ಜೀವ. ನಮ್ಮ ಸಂಸ್ಕøತಿ. ನಮ್ಮ ನೀರು ನಮ್ಮ ಹಕ್ಕು. ಇದು ನಮ್ಮ ಅಕಾರ. ಇದಕ್ಕಾಗಿ ನಾವು ಹೋರಾಡುತ್ತಿದ್ದೇವೆ. ಎಲ್ಲ ಜಾತಿ, ವರ್ಗಗಳು […]