ರಾಮನಗರದಿಂದ 2ನೇ ಹಂತದ ಕಾಂಗ್ರೆಸ್ ಪಾದಯಾತ್ರೆ ಆರಂಭ
ಬೆಂಗಳೂರು,ಫೆ.27- ನೀರಿಗಾಗಿ ನಮ್ಮ ನಡಿಗೆ ಬೃಹತ್ ಪಾದಯಾತ್ರೆ ಇಂದು ರಾಮನಗರದಿಂದ ಮರುಚಾಲನೆಗೊಂಡಿತು. ಎಐಸಿಸಿ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಅನೇಕ ನಾಯಕರು ಚಾಲನೆ ನೀಡಿದರು. ಜ.9ರಿಂದ ಸುಮಾರು 10 ದಿನಗಳ ಕಾಲ ನಡೆಯಬೇಕಿದ್ದ ಪಾದಯಾತ್ರೆ ಕೊರೊನಾ ಸೋಂಕು ಹೆಚ್ಚಳದಿಂದಾಗಿ ನಾಲ್ಕು ದಿನಗಳಲ್ಲೇ ಮೊಟಕುಗೊಂಡಿತ್ತು. ಬಳಿಕ ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾಗಿದ್ದು ಈಗ 2ನೇ ಹಂತದಲ್ಲಿ ರಾಮನಗರದಿಂದಲೇ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ. […]