ಕಾಂಗ್ರೆಸ್ ಪ್ರತಿಭಟನೆಗೆ ಜಾಹೀರಾತು ಮಾಫಿಯಾ ಸಾಥ್ ; ಎನ್.ಆರ್.ರಮೇಶ್ ಆರೋಪ

ಬೆಂಗಳೂರು,ಮಾ.3-ಕಾಂಗ್ರೆಸ್ ಪ್ರತಿಭಟನೆಗೆ ಜಾಹೀರಾತು ಮಾಫಿಯಾ ಸಾಥ್ ನೀಡಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಆರ್.ರಮೇಶ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಕಾಂಗ್ರೆಸ್ ಪಕ್ಷದ ಮೆರವಣಿಗೆಯಲ್ಲಿ ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಜಾಹೀರಾತು ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರಿಗೆ ದೂರು ನೀಡಿದ್ದಾರೆ. ಪ್ರಸ್ತುತ […]