“ದೇವರಾಣೆ, ಅಪ್ಪರಾಣೆ ಮೇಕೆದಾಟು ಯೋಜನೆ ಮಾಡೋದು ನಾವೇ”

ಮೈಸೂರು,ಜ.24- ದೇವರಾಣೆ, ನಮ್ಮ ಅಪ್ಪರಾಣೆ ಹೇಳುತ್ತಿದ್ದೇನೆ. ಮೇಕೆದಾಟು ಯೋಜನೆಯನ್ನು ಮಾಡುವುದು ನಾವೇ. ಇದರಲ್ಲಿ ಯಾವುದೇ ಅನುಮಾನಗಳು ಬೇಡ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು. ಮೈಸೂರು ಪ್ರವಾಸದಲ್ಲಿರುವ ಸಚಿವ ಸೋಮಣ್ಣ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸುಭದ್ರ ಸರ್ಕಾರಗಳಿವೆ. ರಾಜ್ಯ ಸರ್ಕಾರದಲ್ಲಿ ಯಾವ ಅಭದ್ರತೆಯೂ ಇಲ್ಲ. ಎಲ್ಲವೂ ಸುಸೂತ್ರವಾಗಿ ಸಾಗುತ್ತಿವೆ. ಅದರ ಬಗ್ಗೆ ಯಾರಿಗೂ ಯೋಚನೆ ಬೇಡ. ಕೆಲವು ಶಾಸಕರು ವೈಯುಕ್ತಿಕವಾಗಿ ಕೂತು ಮಾತನಾಡುವುದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸಬೇಡಿ. […]

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಸರ್ಕಾರ ಸ್ಪಂದಿಸಲಿ: ಡಿಕೆಶಿ

ಬೆಂಗಳೂರು, ಜ.15- ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣವಾಗಬೇಕೆಂಬುದು ಜನರ ಭಾವನೆಯಾಗಿದ್ದು, ಸರ್ಕಾರ ಅದಕ್ಕೆ ಸ್ಪಂದಿಸಬೇಕು. ಸಾಮಾಜಿಕ ಹೋರಾಟಗಾರರ ಕಷ್ಟಗಳಿಗೆ ಸರ್ಕಾರವೇ ಉತ್ತರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಹೋರಾಟಗಾರ್ತಿ ಮೇಘಾ ಪಾಟ್ಕರ್ ಸೇರಿದಂತೆ ಹಲವರ ಆಕ್ಷೇಪಗಳ ಬಗ್ಗೆ ಪ್ರತಿಕ್ರಿಯಿಸಿದರು. ಜೀವ ಇದ್ದರೆ ಜೀವನ. ಜೀವ ಎಂದರೆ ನೀರು. ಆ ನೀರನ್ನು ಸಂಗ್ರಹಣೆ ಮಾಡಲು ಅಣೆಕಟ್ಟು ನಿರ್ಮಾಣವಾಗಬೇಕು. ಇಲ್ಲಿ ವ್ಯಕ್ತಿಚಿಂತನೆ ಮುಖ್ಯವಲ್ಲ, ಜನರ ಭಾವನೆಗಳು ಮುಖ್ಯ. […]

ಮೇಕೆದಾಟು ಯೋಜನೆ ಕುರಿತು ಪ್ರತಿಕ್ರಿಯೆ ನೀಡಲ್ಲ : ಎಚ್‍ಡಿಡಿ

ಬೆಂಗಳೂರು, ಜ.13- ಮೇಕೆದಾಟು ಯೋಜನೆ ವಿಚಾರ ಸುಪ್ರೀಂಕೋರ್ಟ್‍ನಲ್ಲಿರುವುದರಿಂದ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದಲ್ಲಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸುವುದು ಸರಿಯಲ್ಲ. ಮೇಕೆದಾಟು ಯೋಜನೆ ಕುರಿತಂತೆ ಎರಡು ರಾಷ್ಟ್ರೀಯ ಪಕ್ಷಗಳು ಜಾಹೀರಾತು ಕೊಟ್ಟಿರುವುದನ್ನು ಗಮನಿಸಿದ್ದೇನೆ. ಆ ಬಗ್ಗೆ ಚರ್ಚಿಸುವುದಿಲ್ಲ. ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಕೋವಿಡ್ ಮತ್ತು ಓಮಿಕ್ರಾನ್ ವೇಗವಾಗಿ ಹರಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ತಜ್ಞರ ಸಲಹೆ ಆಧರಿಸಿ ಕ್ರಮ […]

ಮೇಕೆದಾಟು ಯೋಜನೆ ಆರಂಭಿಸಲು ಒತ್ತಾಯಿಸಿ ವಾಟಾಳ್ ಪ್ರತಿಭಟನೆ

ಬೆಂಗಳೂರು, ಜ.13- ಮೇಕೆದಾಟು ಯೋಜನೆ ಕೂಡಲೇ ಆರಂಭಿಸಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮೈಸೂರು ಬ್ಯಾಂಕ್ ವೃತ್ತದ ಬಳಿ ಇಂದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಯನ್ನು ವಿಳಂಬ ಮಾಡದಂತೆ ಸರ್ಕಾರ ಆರಂಭಿಸಬೇಕು. ಈ ಯೋಜನೆಗಾಗಿ ಕನ್ನಡಪರ ಸಂಘಟನೆಗಳು ನಿರಂತರವಾಗಿ ಹೋರಾಟ ಮಾಡುತ್ತ ಬಂದಿವೆ. ಕಾವೇರಿ ಕೊಳ್ಳದಲ್ಲಿ ರಾಜ್ಯ ಕೈಗೊಳ್ಳುವ ನೀರಾವರಿ ಯೋಜನೆ ಸಂಬಂಧ ತಮಿಳುನಾಡು ಪದೇ ಪದೇ ಅಡ್ಡಿಪಡಿಸುತ್ತಲೇ ಇದೆ. ಇದಕ್ಕಾಗಿ ನಾವು ಹೋರಾಟ ಮಾಡುತ್ತ […]

ಎಂ.ಬಿ.ಪಾಟೀಲ್‍ಗೆ ಕಾರಜೋಳ ತಿರುಗೇಟು

ಬೆಂಗಳೂರು/ಬಾಗಲಕೋಟೆ, ಜ.13- ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಇಂದು ಮತ್ತೊಂದು ಪತ್ರಿಕಾಗೋಷ್ಠಿ ನಡೆಸಿ ತಮ್ಮ ಕಾಲದ ಮೇಕೆದಾಟು ಘಟನೆಗಳನ್ನು ಇತಿಹಾಸದ ರೂಪದಲ್ಲಿ ಬಿಂಬಿಸಿ ತಮ್ಮ ಅಧಿಕಾರಾವಧಿಯಲ್ಲಿ ಆಗಿರುವ ವಿಳಂಬವನ್ನು ಮರೆಮಾಚುವ ಪ್ರಯತ್ನ ಮಾಡಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ. ಪ್ರಾರಂಭದಿಂದಲೂ ನಾನು ತಮ್ಮನ್ನು ಪ್ರಶ್ನಿಸುತ್ತಿರುವುದು ಜಲಸಂಪನ್ಮೂಲ ಸಚಿವರಾಗಿದ್ದಾಗ ತಾವು ಒಂದು ಡಿ.ಪಿ.ಆರ್. ಸಿದ್ಧಪಡಿಸಲು ಅನಗತ್ಯವಾಗಿ ಕಾಲಹರಣ ಮಾಡಲಾಯಿತು ಎಂಬುದರ ಕುರಿತೇ ಹೊರತು ತಾವು ಪಟ್ಟಿ ಮಾಡಿರುವ ಘಟನಾವಳಿಗಳು ಸರ್ಕಾರದ ಕಡತದಲ್ಲಿಯೇ ಇವೆ […]

40 ವರ್ಷ ರಾಜ್ಯವಾಳಿದ ಕಾಂಗ್ರೆಸ್ ಮೇಕೆದಾಟು ಯೋಜನೆ ಜಾರಿಗೊಳಿಸಲಿಲ್ಲ?: ಸಿದ್ದುಗೆ ಬಿಜೆಪಿ ಗುದ್ದು

ಬೆಂಗಳೂರು,ಜ.3- ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು ಎಂಬ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಆರೋಪಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯನವರೇ, ನೀವು ಮಾತನಾಡುವಾಗ 1968ರಲ್ಲೇ ಕಾಂಗ್ರೆಸ್ ಸರ್ಕಾರ ಮೇಕೆದಾಟು ಯೋಜನೆ ಜಾರಿಗೆ ಪ್ರಯತ್ನ ಮಾಡಿತ್ತು ಎಂದು ಹೇಳಿದ್ದೀರಿ. ಹಾಗಾದರೆ ಆಗ ಕೇಂದ್ರ ಮತ್ತು ರಾಜ್ಯದಲ್ಲಿ ಯಾವ ಸರ್ಕಾರ ಆಡಳಿತ ನಡೆಸುತ್ತಿತ್ತು? ಆ ನಂತರವು 40 ವರ್ಷಗಳ ಕಾಲ ರಾಜ್ಯವಾಳಿದ ನಿಮ್ಮ ಕಾಂಗ್ರೆಸ್ […]

ʼಸಿದ್ದಸುಳ್ಳುಶೂರ!!ʼ. : ಸಿದ್ಧರಾಮಯ್ಯ ವಿರುದ್ಧ ಎಚ್‍ಡಿಕೆ ಟ್ವೀಟ್ ವಾರ್

ಬೆಂಗಳೂರು, ಜ.3- ಮೇಕೆದಾಟು ಯೋಜನೆ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಟ್ವೀಟ್ ಮೂಲಕ ವಾಗ್ದಾಳಿ ಮುಂದುವರೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸತ್ಯಕ್ಕೆ ಸಮಾ ಕಟ್ಟಿ ಸುಳ್ಳಿನಯಾತ್ರೆಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ವಿಧಾನಸಭೆ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ಸುಳ್ಳಿನ ಸರಮಾಲೆಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುವ ರಾಜಕೀಯ ಹುಂಬತನವಲ್ಲದೆ ಮತ್ತೇನೂ ಅಲ್ಲ ಎಂದು ಟೀಕಿಸಿದ್ದಾರೆ. ಅಬ್ಬಾ..! […]