ಬಿಜೆಪಿ ಸದಸ್ಯತ್ವದಿಂದಲೇ ಮಾಡಾಳ್ ವಿರೂಪಾಕ್ಷಪ್ಪ ಉಚ್ಛಾಟನೆ..?

ಬೆಂಗಳೂರು,ಮಾ.6- ರಾಸಾಯನಿಕ ವಸ್ತುಗಳನ್ನು ಪೂರೈಕೆ ಮಾಡಲು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟು ಸರ್ಕಾರ ಹಾಗೂ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಹಿನ್ನಲೆಯಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಛಾಟಿಸಲು ನಿರ್ಧರಿಸಲಾಗಿದೆ. ನಾಳೆ ಸಂಜೆಯೊಳಗೆ ಅಧಿಕೃತ ಆದೇಶ ಪಕ್ಷದಿಂದ ಹೊರಬೀಳಲಿದ್ದು, ಒಂದು ವೇಳೆ ಮಾಡಾಳ್ ವಿರೂಪಾಕ್ಷಪ್ಪ ಪಕ್ಷದಿಂದ ಉಚ್ಛಾಟನೆಯಾದರೆ ಇತ್ತೀಚೀನ ದಿನಗಳಲ್ಲೇ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡ ದಿಟ್ಟ ನಿಲುವು ಇದಾಗಲಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ಪಕ್ಷದ ಪ್ರಧಾನ […]