ಶೀಘ್ರದಲ್ಲೇ ವಿಷ್ಣು ಸ್ಮಾರಕ ಲೋಕಾರ್ಪಣೆ

ಬೆಂಗಳೂರು,ನ.27- ಅಭಿಮಾನಿಗಳ ಕೋರಿಕೆಯಂತೆ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಸ್ಮಾರಕವು ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ನಿರ್ಮಾಣವಾಗುತ್ತಿದ್ದು, ಶೀಘ್ರದಲ್ಲೇ ಉದ್ಘಾಟನೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷ್ಣುವರ್ಧನ್ ಅವರ ಸ್ಮಾರಕದ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸಿ ಲೋಕಾರ್ಪಣೆ ಮಾಡಬೇಕೆಂಬುದು ಅಭಿಮಾನಿಗಳ ಒತ್ತಾಸೆಯಾಗಿದೆ. ಶೀಘ್ರದಲ್ಲೇ ಅವರ ಆಸೆಯನ್ನು ನೆರವೇರಿಸಲಾಗುವುದು ಎಂದು ಭರವಸೆ ನೀಡಿದರು. ಸ್ಮಾರಕ ನಿರ್ಮಾಣ ವಿವಿಧ ಕಾರಣಗಳಿಂದ ವಿಳಂಬವಾಗಿತ್ತು. ಈಗ ಎಲ್ಲವೂ ಸರಿ ಹೋಗಿರುವುದರಿಂದ ಯಾವುದೇ ಸಮಸ್ಯೆ ಇಲ್ಲ. ಕುಟುಂಬದವರ ಅಪೇಕ್ಷೆಯಂತೆ […]

ನಾಳೆ ಡಾ.ನಾಗರಾಜ ಜಮಖಂಡಿ ಮೆಮೋರಿಯಲ್ ಟ್ರಸ್ಟ್‍ನಿಂದ ಪ್ರಶಸ್ತಿ ಪ್ರದಾನ

ಬೆಂಗಳೂರು,ನ.18- ಡಾ.ನಾಗರಾಜ ಜಮಖಂಡಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ನಾಳೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಬೆಂಗಳೂರಿನ ಅರಮನೆ ರಸ್ತೆಯ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಅವರಣದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಮುರುಗೇಶ್ ನಿರಾಣಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ವಿಧಾನಪರಿಷತ್ ಮಾಜಿ ಸದಸ್ಯರಾದ ಆರ್.ವಿ.ವೆಂಕಟೇಶ್, ಮೋಹನ್ ಲಿಂಬೆಕಾಯಿ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಇದೇ ವೇಳೆ ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದ […]

ಕೋಲ್ಕತ್ತಾದಲ್ಲಿ ಡ್ರೋನ್ ಬಳಸಿದ ಇಬ್ಬರು ಬಾಂಗ್ಲಾದೇಶೀಯರ ಬಂಧನ

ಕೋಲ್ಕತ್ತಾ, ಆಗಸ್ಟï 12 – ಡ್ರೋನ್ ಮೂಲಕ ಇಲ್ಲಿನ ವಿಕ್ಟೋರಿಯಾ ಸ್ಮಾರಕ ಭವನ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಛಾಯಾಚಿತ್ರಗಳನ್ನು ಸೆರೆಹಿಡಿದ ಆರೋಪದ ಮೇಲೆ ಇಬ್ಬರು ಬಾಂಗ್ಲಾದೇಶೀಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಯೂಸಿಯಂನ ಭದ್ರತೆಯಲ್ಲಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಹೇಸ್ಟಿಂಗ್ಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಕಾರ್ಯಾಚರಣೆ ಕೈಗೊಂಡು ಬಾಂಗ್ಲಾದೇಶದ ಇಬ್ಬರನ್ನು ವಿಕ್ಟೋರಿಯಾ ಮೆಮೋರಿಯಲ್ ಹಾಲ್ ಕಾಂಪೌಂಡ್‍ನಲ್ಲಿ ಬಂಧಿಲಾಗಿದೆ. ಆರಂಭಿಕ ತನಿಖೆಯಲ್ಲಿ ಇಬ್ಬರು ಬಾಂಗ್ಲಾದೇಶಿಗಳು ಮಾನವರಹಿತ ವೈಮಾನಿಕ ವಾಹನ ಡ್ರೋನ್ ಬಳಸಿ […]

ಅಂಬರೀಷ್ ಸ್ಮಾರಕಕ್ಕೆ ನಾಳೆ ಗುದ್ದಲಿ ಪೂಜೆ

ಬೆಂಗಳೂರು.ಫೆ.26- ರೆಬಲ್‍ಸ್ಟಾರ್ ಅಂಬರೀಷ್ ಸ್ಮಾರಕ ನಿರ್ಮಾಣಕ್ಕೆ ನಾಳೆ ಗುದ್ದಲಿ ಪೂಜೆ ನೆರವೇರಲಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೆ ಮೈಸೂರಿನಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ನಾಳೆ ಅಂಬರೀಷ್ ಸ್ಮಾರಕ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರೆವೇರಿಸಲಾಗುವುದು ಎಂದು ಹೇಳಿದರು. ಅದೇ ರೀತಿ ಚಿತ್ರನಗರಿ ನಿರ್ಮಾಣಕ್ಕೆ ಸ್ಥಳ ನಿಗಧಿ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಸರ್ಕಾರ ಸೂಚಿಸುವ ಪ್ರದೇಶದಲ್ಲೇ ಚಿತ್ರ ನಗರಿ ನಿರ್ಮಾಣ ಮಾಡಲಾಗುವುದು ಎಂದರು. ಮೈಸೂರು […]