ಬಾಂಗ್ಲಾ ವಿಮಾನದಲ್ಲಿ ಬಟ್ಟೆ ಬಿಚ್ಚಿ ಬಡಿದಾಡಿಕೊಂಡ ಪ್ರಯಾಣಿಕರು

ಡಾಕಾ,ಜ.10-ವಿಮಾನದಲ್ಲಿ ಪ್ರಯಾಣಿಕರು ತೋರುವ ಅಶಿಸ್ತಿನ ಪ್ರಕರಣಗಳು ಪ್ರತಿನಿತ್ಯ ಸುದ್ದಿ ಮಾಡುತ್ತಿರುವ ಸಂದರ್ಭದಲ್ಲೇ ಬಾಂಗ್ಲಾ ವಿಮಾನದಲ್ಲಿ ಇಬ್ಬರು ಪ್ರಯಾಣಿಕರು ಬಟ್ಟೆ ಬಿಚ್ಚಿ ಬಡಿದಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬಾಂಗ್ಲಾ ಸರ್ಕಾರಿ ಒಡೆತನದ ವಿಮಾನದಲ್ಲಿ ನಡೆದಿರುವ ಈ ಘಟನೆಯನ್ನು ಬಿಟಾಂಕೊ ಬಿಸ್ವಾಸ್ ಎನ್ನುವವರು ಟ್ವಿಟರ್‍ನಲ್ಲಿ ಹಂಚಿಕೊಂಡಿದ್ದಾರೆ. ಆದರೆ, ಈ ಘಟನೆ ನಡೆದಿದ್ದು ಯಾವಾಗ ಎನ್ನುವ ಮಾಹಿತಿ ಮಾತ್ರ ಹೊರಬಿದ್ದಿಲ್ಲ. ವಿಮಾನದ ಮುಂಭಾಗದಲ್ಲಿ ಕುಳಿತಿದ್ದ ಪ್ರಯಾಣಿಕನೊಬ್ಬ ಇನ್ನೊಬ್ಬ ಪ್ರಯಾಣಿಕನೊಂದಿಗೆ ಮೊದಲ ವಾಗ್ವಾದ ನಡೆಸುತ್ತಿರುವುದು ಕಂಡು ಬರುತ್ತದೆ. ನಂತರ ಇಬ್ಬರು ಪ್ರಯಾಣಿಕರು ಪರಸ್ಪರ […]