ಮುಂದುವರೆದ ಬಿಸಿಯೂಟ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಬೆಂಗಳೂರು,ಆ.17- ತಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಎರಡನೆ ದಿನಕ್ಕೆ ಕಾಲಿಟ್ಟಿದೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿರುವ ಸಾವಿರಾರು ಕಾರ್ಯಕರ್ತೆಯರು ನಿನ್ನೆಯಿಂದ ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿದ್ದರೂ ಪ್ರತಿಭಟನಾ ಸ್ಥಳಕ್ಕೆ ಸರ್ಕಾರದ ಯಾವೊಬ್ಬ ಪ್ರತಿನಿಧಿಯೂ ಧಾವಿಸದಿರುವುದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ. ನಿನ್ನೆಯಿಂದ ನಾವು ಹೋರಾಟ ನಡೆಸುತ್ತಿದ್ದರೂ ನಮ್ಮತ್ತ ತಿರುಗಿ ನೋಡದ ಸಚಿವರು ಹಾಗೂ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗುತ್ತ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 6500 ಕಾರ್ಯಕರ್ತೆಯರನ್ನು […]

ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗೋದು ಡೌಟ್..!

ಬೆಂಗಳೂರು,ಆ.16- ಇಂದಿನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗೋದು ಡೌಟ್..! ಯಾಕೆ ಅಂತೀರಾ.. ಬಿಸಿಯೂಟ ಕಾರ್ಯಕರ್ತೆ ಯರು ಇಂದಿನಿಂದ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಹಾದಿ ಹಿಡಿದಿರುವುದರಿಂದ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗುವ ಸಾಧ್ಯತೆಗಳಿಲ್ಲ. ಇದುವರೆಗೂ ಬಿಸಿಯೂಟ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದ 60 ವರ್ಷ ಮೇಲ್ಪಟ್ಟ ಕಾರ್ಯಕರ್ತೆಯರನ್ನು ಸೇವೆಯಿಂದ ತೆಗೆದುಹಾಕಿರುವ ಸರ್ಕಾರದ ಕ್ರಮ ಖಂಡಿಸಿ ಇಂದಿನಿಂದ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ಹಾದಿ ಹಿಡಿದಿದ್ದಾರೆ. ಇದುವರೆಗೂ ಸುಮಾರು 6500ಕ್ಕೂ ಹೆಚ್ಚು ಕಾರ್ಯಕರ್ತೆಯರನ್ನು ಕೆಲಸದಿಂದ ವಜಾ […]