ಮಲ್ಲೇಶ್ವರಂನಲ್ಲಿ ಗಂಧರ್ವಲೋಕ ಸೃಷ್ಟಿ : ನಡುರಾತ್ರಿ ಸಿಎಂ ಧ್ವಜಾರೋಹಣ
ಬೆಂಗಳೂರು, ಆ.15- ವೇದಿಕೆಯ ಮೇಲೆಲ್ಲ ತಿರಂಗದ ಝಗಮಗ ಬಣ್ಣಗಳ ಬಳುಕು, ಸಭಾಂಗಣದಲ್ಲಿ ನೆರೆದಿದ್ದವರ ಕೈಯಲ್ಲಿ ಅರಳಿದ್ದ ರಾಷ್ಟ್ರಧ್ವಜಗಳು, ಶಾಸ್ತ್ರೀಯ ನೃತ್ಯ ಮತ್ತು ಸಂಗೀತಗಳ ಹದವಾದ ಸಮ್ಮಿಲನದಲ್ಲಿ ತಾಯಿ ಭಾರತಾಂಬೆಯ ಸ್ತುತಿ, ಬಳಿಕ ಸಮಕಾಲೀನ ಚಿತ್ರಗೀತೆಗಳ ಮೂಲಕ ಜನರಲ್ಲಿ ಉತ್ಸಾಹದ ಅಲೆ ಎಬ್ಬಿಸಿದ ಹೆಸರಾಂತ ಗಾಯಕಿ ಮಂಗ್ಲಿ (ಸತ್ಯವತಿ) ಮತ್ತು ಅವರ ತಂಗಿ ಇಂದಿರಾವತಿ, ಇವೆಲ್ಲಕ್ಕೆ ಕಳಶವಿಟ್ಟಂತೆ ನಟ್ಟ ನಡುರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಧ್ವಜಾರೋಹಣ ಮಾಡಿದರು. ಇವು ಡಾ.ಸಿ ಎನ್ ಅಶ್ವತ್ಥ […]