ರಾಜ್ಯದ ಕೆಲವೆಡ ಅಕಾಲಿಕ ಮಳೆ ಸಾಧ್ಯತೆ

ಬೆಂಗಳೂರು, ಜ.31-ಬಂಗಾಳಕೊಲ್ಲಿಯಲ್ಲಿ ಲಘು ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಕೆಲವೆಡೆ ಚದುರಿದಂತೆ ಅಕಾಲಿಕ ಮಳೆಯಾಗುವ ಸಾಧ್ಯತೆಗಳಿವೆ. ಭಾಗಶಃ ಮೋಡ ಕವಿದ ವಾತಾವರಣ ಎರಡು ಮೂರು ದಿನಗಳ ಕಾಲ ಕಂಡು ಬರಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪ್ರಬಲವಾಗುವ ಲಕ್ಷಣಗಳಿಲ್ಲ. ಹೀಗಾಗಿ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಳೆಯಾಗಬಹುದು. ಆದರೆ, ವ್ಯಾಪಕ ಪ್ರಮಾಣದ ಮಳೆಯಾಗುವ ಲಕ್ಷಣಗಳಿಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಬೆಂಗಳೂರು, […]