ಬಜೆಟ್ ಹೈಲೈಟ್ : ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪನೆ

ಬೆಂಗಳೂರು, ಮಾ.4- ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಮೌಲ್ಯವರ್ಧನೆಗೆ ಉತ್ತೇಜಿಸಲು, ಸಬರರಾಜು ಸರಪಳಿಯನ್ನು ಸದೃಢಗೊಳಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್‍ಗಳನ್ನು ಹಂತಹಂತವಾಗಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುತ್ತದೆ. ಕಲ್ಬುರ್ಗಿ ಮತ್ತು ಯಾದಗಿರಿಯ ಜಿಲ್ಲೆಯಲ್ಲಿ ಬೆಳೆಯುವ ತೊಗರಿ ಬೆಳೆಯನ್ನು ಭೀಮಾ ಪಲ್ಸ್ ಬ್ರಾಂಡ್‍ನಡಿಯಲ್ಲಿ ಮಾರಾಟ ಮಾಡಲು ಉದ್ದೇಶಿಸಲಾಗಿದೆ.ಮುಖ್ಯಮಂತ್ರಿ ಇಂದು ಮಂಡಿಸಿದ 2022-23ನೆ ಆಯವ್ಯಯದಲ್ಲಿ ಈ ಪ್ರಸ್ತಾಪ ಮಾಡಿದ್ದು , ನೈಸರ್ಗಿಕ ಕೃಷಿ ಉತ್ತೇಜನಕ್ಕಾಗಿ ಎಲ್ಲಾ ಕೃಷಿ ಮತ್ತು ತೋಟಗಾರಿಕೆ ವಿವಿಗಳ ಮುಖಾಂತರ ಸಾವಿರ ಎಕರೆ ಪ್ರದೇಶದಲ್ಲಿ […]