ಗಣಿಗಾರಿಕೆಯಿಂದ ತೊಂದರೆಗೊಳಗಾದ ಪ್ರದೇಶಗಳ ಅಭಿವೃದ್ಧಿಗೆ 19 ಸಾವಿರ ಕೋಟಿ

ಬೆಂಗಳೂರು,ಫೆ.15- ಗಣಿಗಾರಿಕೆಯಿಂದ ತೊಂದರೆಗೊಳಗಾದ ಪ್ರದೇಶಗಳ ಅಭಿವೃದ್ಧಿಗೆ ಸಂಗ್ರಹಿಸಲಾಗಿರುವ 19 ಸಾವಿರ ಕೋಟಿ ರೂ.ಗಳನ್ನು ಶೀಘ್ರವೇ ಉಸ್ತುವಾರಿ ಸಮಿತಿ(ಮಾನಿಟರಿಂಗ್ ಕಮಿಟಿ)ಯಿಂದ ಬಿಡುಗಡೆ ಮಾಡಿಸಿಕೊಂಡು ಅಭಿವೃದ್ಧಿಗೆ ಕಾರ್ಯಗಳಿಗೆ ಬಳಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ತಿಳಿಸಿದರು. ವಿಧಾನಪರಿಷತ್‍ನಲ್ಲಿ ಸದಸ್ಯ ಕೆ.ಪಿ.ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾಜಿಕ ಪರಿವರ್ತನಾ ಸಂಸ್ಥೆಯ ವರದಿ ಆಧರಿಸಿ ಸುಪ್ರೀಂಕೋರ್ಟ್ ಉಸ್ತುವಾರಿ ಸಮಿತಿಯನ್ನು ರಚಿಸಿದೆ. ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಗಣಿಗಾರಿಕೆಯಿಂದ ಹಾನಿಗೊಳಗಾದ ಪರಿಸರ ಪುನರುಜ್ಜೀವನಕ್ಕೆ ಸಮಗ್ರ ಯೋಜನೆ ರೂಪಿಸಿ […]