“ನವೀನ್ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಕೇಂದ್ರ ತೀರ್ಮಾನಿಸುತ್ತೆ”

ತುಮಕೂರು,ಮಾ.3- ರಷ್ಯಾ ದಾಳಿಯಿಂದ ಉಕ್ರೇನ್‍ನಲ್ಲಿ ಮೃತಪಟ್ಟ ಹಾವೇರಿಯ ವಿದ್ಯಾರ್ಥಿ ನವೀನ್ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿದ್ಯಾರ್ಥಿ ನವೀನ್  ಉಕ್ರೇನ್‍ನಲ್ಲಿ ಸಾವನ್ನಪ್ಪಿದ್ದು, ಆತನ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದರು. ರಾಜ್ಯದ ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ಮೆಡಿಕಲ್ ವ್ಯಾಸಂಗ ಮಾಡಲು ಹೋಗಲು ನೀಟ್ ವ್ಯವಸ್ಥೆಯೇ ಕಾರಣ ಎಂಬ ಅಸಮಧಾನ ವ್ಯಕ್ತವಾಗುತ್ತಿದ್ದು, ಸಂಬಂಧಪಟ್ಟ […]