ಪೋಕ್ಸೋ ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಗಳ ಸ್ಥಾಪನೆ

ಬೆಳಗಾವಿ, ಡಿ.26- ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಫೋಕ್ಸೋ ಕಾಯ್ದೆ ಅನ್ವಯ ದಾಖಲಿಸಿರುವ ಪ್ರಕರಣಗಳ ವಿಚಾರಣೆಯನ್ನು ನಡೆಸಲು ಈಗಾಗಲೇ ಪ್ರತಿ ಜಿಲ್ಲೆಗೊಂದರಂತೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನ ಪರಿಷತ್ತಿಗೆ ತಿಳಿಸಿದರು. ಪ್ರಶ್ನೋತರ ವೇಳೆಯಲ್ಲಿ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪೊಕ್ಸೋ ಕಾಯ್ದೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಪ್ರಕರಣಗಳಲ್ಲಿ ನೊಂದವರ ಪರವಾಗಿ ನ್ಯಾಯಾಲಯಗಳಲ್ಲಿ ಸಮರ್ಥವಾಗಿ ವಾದ ಮಂಡಿಸಲು ವಿಶೇಷ […]