“ಬಂಡತನ ಮತ್ತು ಬಂಡೆತನ ಯಾರಿಗೂ ಶೋಭೆ ತರುವುದಿಲ್ಲ”

ಬೆಂಗಳೂರು,ಜ.11- ಬಂಡತನ ಮತ್ತು ಬಂಡೆತನ ಯಾರಿಗೂ ಕೂಡ ಶೋಭೆ ತರುವುದಿಲ್ಲ ಎಂದು ಹೇಳುವ ಮೂಲಕ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಅವರು ಮತ್ತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದಕ್ಕೂ ಇತಿಮಿತಿ ಇರುತ್ತದೆ. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಬಂಡತನ ಮತ್ತು ಬಂಡೆತನ ತೋರಿದರೆ ಸರ್ಕಾರ ಕೈ ಕಟ್ಟಿ ಕೂರಲು ಸಾಧ್ಯವಿಲ್ಲ ಎಂದು ಗುಡುಗಿದರು. ಸರ್ಕಾರವೇ ಹೆಚ್ಚುವರಿ ಜಿಲ್ಲಾಧಿಕಾರಿಯವರನ್ನು ಕಳುಹಿಸಿ ಸೋಂಕಿತರನ್ನಾಗಿ ಮಾಡುತ್ತಾರೆ ಎಂಬ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, […]