ಮಹದಾಯಿ ಯೋಜನೆಗೆ ಅನುಮೋದನೆ ಸಿಗುವುದಾಗಿ ಕಾರಜೋಳ ವಿಶ್ವಾಸ

ನವದೆಹಲಿ,ಡಿ.13- ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ರವರು ಇಂದು ನವ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ವಿನಂತಿಸಿದರು. ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ನಿವಾಸದಲ್ಲಿ ಇಂದು ಮುಂಜಾನೆ ಈ ಮಹತ್ವದ ಸಭೆ ನಡೆಯಿತು. ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ ಕುರಿತು ಮಹತ್ವದ […]

3 ಲಕ್ಷ ಟನ್ ರಾಗಿ ಖರೀದಿದಾಗಿ ಕೇಂದ್ರಕ್ಕೆ ಅನುಮತಿ ಪತ್ರ

ಬೆಂಗಳೂರು,ಮಾ.9- ಮೂರು ಲಕ್ಷ ಟನ್ ರಾಗಿ ಖರೀದಿದಾಗಿ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಧಾನಸಭೆಗೆ ತಿಳಿಸಿದರು. ಶೂನ್ಯವೇಳೆಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಜನವರಿ 29ರಂದು ಮೂರು ಲಕ್ಷ ಟನ್ ರಾಗಿ ಖರೀದಿಗೆ ಅನುಮತಿ ನೀಡುವಂತೆ ಎಫ್‍ಸಿಐಗೆ ಪತ್ರ ಬರೆಯಲಾಗಿದೆ. ಅನುಮತಿ ಸಿಕ್ಕ ಕೂಡಲೇ ರಾಗಿ ಖರೀದಿಯನ್ನು ಆರಂಭಿಸಲಾಗುವುದು ಎಂದರು. 2021-22ನೇ ಸಾಲಿನಲ್ಲಿ 2.10 ಮೆಟ್ರಿಕ್ ಟನ್ ಖರೀದಿಗೆ ಅನುಮತಿ ನೀಡಿತ್ತು. ಈಗಾಗಲೇ […]

ಬಜೆಟ್‍ನಲ್ಲಿ ನೀರಾವರಿಗೆ ಹೆಚ್ಚಿನ ಅನುದಾನ : ಸಚಿವ ಗೋವಿಂದ ಕಾರಜೋಳ

ಬೆಂಗಳೂರು, ಮಾ.2- ರಾಜ್ಯದ ನೀರಾವರಿ ಯೋಜನೆಗಳಿಗೆ ಹಿಂದಿನ ಯಾವ ಸರ್ಕಾರವೂ ನೀಡದಷ್ಟು ಅನುದಾನವನ್ನು ನಮ್ಮ ಸರ್ಕಾರ ಬಜೆಟ್‍ನಲ್ಲಿ ಒದಗಿಸಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಾವರಿ ಯೋಜನೆಗಳಿಗೆ ಮಾರ್ಚ್ 4ರಂದು ಮಂಡಿಸಲಿರುವ 2022-23ನೆ ಸಾಲಿನ ಬಜೆಟ್‍ನಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಿಎಂ ಅವರಲ್ಲಿ ಮನವಿ ಮಾಡಲಾಗಿದೆ. ಅನುದಾನದ ಜತೆಗೆ ಕಾಮಗಾರಿಗಳ ತ್ವರಿತ ಚಾಲನೆ, ಮುಳುಗಡೆಯಾಗುವ ಪ್ರದೇಶ ಹಾಗೂ ಜಮೀನುಗಳಿಗೆ ಪರಿಹಾರ, ಪುನರ್ವಸತಿ, ಪುನರ್ […]

ಎಂ.ಬಿ.ಪಾಟೀಲ್‍ಗೆ ಕಾರಜೋಳ ತಿರುಗೇಟು

ಬೆಂಗಳೂರು/ಬಾಗಲಕೋಟೆ, ಜ.13- ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಇಂದು ಮತ್ತೊಂದು ಪತ್ರಿಕಾಗೋಷ್ಠಿ ನಡೆಸಿ ತಮ್ಮ ಕಾಲದ ಮೇಕೆದಾಟು ಘಟನೆಗಳನ್ನು ಇತಿಹಾಸದ ರೂಪದಲ್ಲಿ ಬಿಂಬಿಸಿ ತಮ್ಮ ಅಧಿಕಾರಾವಧಿಯಲ್ಲಿ ಆಗಿರುವ ವಿಳಂಬವನ್ನು ಮರೆಮಾಚುವ ಪ್ರಯತ್ನ ಮಾಡಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ. ಪ್ರಾರಂಭದಿಂದಲೂ ನಾನು ತಮ್ಮನ್ನು ಪ್ರಶ್ನಿಸುತ್ತಿರುವುದು ಜಲಸಂಪನ್ಮೂಲ ಸಚಿವರಾಗಿದ್ದಾಗ ತಾವು ಒಂದು ಡಿ.ಪಿ.ಆರ್. ಸಿದ್ಧಪಡಿಸಲು ಅನಗತ್ಯವಾಗಿ ಕಾಲಹರಣ ಮಾಡಲಾಯಿತು ಎಂಬುದರ ಕುರಿತೇ ಹೊರತು ತಾವು ಪಟ್ಟಿ ಮಾಡಿರುವ ಘಟನಾವಳಿಗಳು ಸರ್ಕಾರದ ಕಡತದಲ್ಲಿಯೇ ಇವೆ […]

ಮೇಕೆದಾಟು ವಿಚಾರ ಸರ್ಕಾರದ ವಿರುದ್ಧ ಎಂ.ಬಿ.ಪಾಟೀಲ್ ಆರೋಪ

ಬೆಂಗಳೂರು,ಜ.12-ಮೇಕೆದಾಟು ಯೋಜನೆ ವಿಷಯದಲ್ಲಿ ಬಿಜೆಪಿ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದು, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಉಡಾಫೆ ವರ್ತನೆ ತೋರಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ. ನಗರದ ಖಾಸಗಿ ಹೋಟೆಲ್‍ನಲ್ಲಿಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಯೋಜನೆಯ ಇತಿಹಾಸ, ಆರಂಭ, ಪ್ರಗತಿ ಸೇರಿದಂತೆ ಸಮಗ್ರ ವಿವರಗಳನ್ನು ದಾಖಲಾತಿ ಮತ್ತು ದಿನಾಂಕ ಸಹಿತವಾಗಿ ವಿವರಿಸಿದರು. 1997-98ರಲ್ಲೇ ಈ ಯೋಜನೆ ಪ್ರಸ್ತಾಪವಾಗಿತ್ತು. ಆದರೆ ಕಾವೇರಿ ನದಿನೀರಿನ ವಿವಾದ ನ್ಯಾಯಾಲಯದಲ್ಲಿದ್ದರಿಂದ ಇದು ಪ್ರಗತಿಯಾಗಿರಲಿಲ್ಲ. ನ್ಯಾಯಾೀಕರಣದ ತೀರ್ಪು ಪ್ರಕಟವಾಗಿ ಅದಕ್ಕೆ ಕೇಂದ್ರ ಸರ್ಕಾರ ಅಸೂಚನೆ ಹೊರಡಿಸಿದ […]