ಬಿಜೆಪಿಯನ್ನು ಪದೇ ಪದೇ ಇಕ್ಕಟ್ಟಿಗೆ ಸಿಲುಕಿಸುತ್ತಿರುವ ಈಶ್ವರಪ್ಪ ವಿವಾದಿತ ಹೇಳಿಕೆಗಳು
ಬೆಂಗಳೂರು,ಫೆ.18- ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಆಗಾಗ ನಾಲಿಗೆ ಹರಿಬಿಟ್ಟು ಸುದ್ದಿಯಾಗುತ್ತಿದ್ದು, ಇವರ ಹೇಳಿಕೆ ಖಂಡಿಸಲೂ ಆಗದೆ, ಸಮರ್ಥಿಸಿಕೊಳ್ಳಲೂ ಆಗದೆ ಬಿಜೆಪಿ ಸಂದಿಗ್ಧ ಸ್ಥಿತಿ ಎದುರಿಸುವಂತಾಗಿದೆ. ಪ್ರತಿಪಕ್ಷ ನಾಯಕರ ವಿರುದ್ಧ ಟೀಕಾ ಪ್ರಹಾರ ನಡೆಸುವ ಭರದಲ್ಲಿ ನಾಲಿಗೆಯನ್ನೇ ಕತ್ತಿಯಂತೆ ಪ್ರಯೋಗಿಸುತ್ತಿದ್ದಾರೆ. ಸಂಘ ಪರಿವಾರದ ಬೆಂಬಲವಿರುವ ಕಾರಣಕ್ಕೆ ಈಶ್ವರಪ್ಪ ಹೇಳಿದ್ದು ತಪ್ಪು ಎಂದು ಹೇಳುವ ಧೈರ್ಯವನ್ನು ತೋರುತ್ತಿಲ್ಲ, ಕಳೆದ ಮೂರು ವರ್ಷಗಳಿಂದ ಈಶ್ವರಪ್ಪ ನೀಡಿರುವ ವಿವಾದಿತ ಹೇಳಿಕೆಗಳೇ ಬಿಜೆಪಿ ನಾಯಕರ ನಿದ್ದೆಗೆಡುವಂತೆ ಮಾಡಿದೆ ಎಂದರೆ ತಪ್ಪಾಗಲಾರದು. ವಿವಾದಿತ ಹೇಳಿಕೆಗಳು: […]