ಸಚಿವರ ಪುತ್ರನಿಗೆ ಬ್ಲಾಕ್‍ಮೇಲ್ ಪ್ರಕರಣ : ಮತ್ತೆ ಮೂವರು ಪೊಲೀಸರ ವಶಕ್ಕೆ..

ಬೆಂಗಳೂರು,ಜ.10- ಸಚಿವ ಎಸ್.ಟಿ. ಸೋಮಶೇಖರ್ ಪುತ್ರ ನಿಶಾಂತ್‍ಗೆ ಬ್ಲಾಕ್‍ಮೇಲ್ ಮಾಡಿ ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಪ್ರಮುಖ ಆರೋಪಿ ರಾಹುಲ್ ಭಟ್ ಎಂಬುವನನ್ನು ಬಂಧಿಸಿರುವ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದು , ದಿನೇ ದಿನೇ ಪ್ರಕರಣ ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣದ ಸೂತ್ರಧಾರ ಯಾರು? ಪಾತ್ರಧಾರಿಗಳು ಯಾರು? ಈ ಪ್ರಕರಣದಲ್ಲಿ ಎಷ್ಟು ಮಂದಿ ಇದ್ದಾರೆ ಎಂಬ ಬಗ್ಗೆ ಸಿಸಿಬಿ ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಇಂಡಿ ಶಾಸಕ ಯಶವಂತ […]