ಮುಜರಾಯಿ ವ್ಯಾಪ್ತಿಯದೇವಸ್ಥಾನಗಳಿಗೆ ಅನುದಾನ ಬಿಡುಗಡೆ : ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು,ಮಾ.7- ಹಣಕಾಸಿನ ಲಭ್ಯತೆ ನೋಡಿಕೊಂಡು ಮುಜರಾಯಿ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಯಲ್ಲಿ ಶಾಸಕ ಆನಂದ್ ಸಿದ್ದುನಾಮೆಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಹುತೇಕ ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯ ದೇವಸ್ಥಾನಗಳಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದ್ದಾರೆ. ಹಣಕಾಸಿನ ಲಭ್ಯತೆ ನೋಡಿಕೊಂಡು ಅನುದಾನ ಬಿಡುಗಡೆ ಮಾಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಯೂ ೀ ಕುರಿತು ಚರ್ಚಿಸಿ ಹಣ ಬಿಡುಗಡೆ ಮಾಡುವ ಆಶ್ವಾಸನೆ […]