ದೇಗುಲಗಳ ಆಸ್ತಿ ಸಂರಕ್ಷಣೆಗೆ ಕ್ರಮ : ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು ಸೆ.14 : ರಾಜ್ಯದ ಮುಜರಾಯಿ ಇಲಾಖೆಯ ಅಡಿಯಲ್ಲಿರುವ ದೇವಸ್ಥಾನಗಳ ಭೂಮಿ ಒತ್ತುವರಿದಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಾನ್ಯ ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಇಂದು ವಿಧಾನಪರಿಷತ್ತಿನ ಪ್ರಶ್ನೋತ್ತರ ಕಾರ್ಯಕಲಾಪದಲ್ಲಿ ಸದಸ್ಯರಾದ ಎನ್‌ ರವಿಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸುವ ಸಂಧರ್ಭದಲ್ಲಿ ಈ ಮಾತುಗಳನ್ನು ಹೇಳಿದರು. ಬೆಂಗಳೂರು ನಗರ ತಿಗಳರ ಪೇಟೆಯಲ್ಲಿರುವ ಶ್ರೀ ಧರ್ಮರಾಯ ಸ್ವಾಮಿ ದೇವಾಲಯವು ಪ್ರವರ್ಗ “ಬಿ” ವರ್ಗದ ಧಾರ್ಮಿಕ ಸಂಸ್ಥೆಯಾಗಿರುತ್ತದೆ. ಪ್ರಸ್ತಾವಿತ ದೇವಾಲಯವು ಬೆಂಗಳೂರು ನಗರ […]

ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಆನೆಬಲ ತುಂಬಿದ ಬಜೆಟ್‌ : ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು ಮಾರ್ಚ್‌ 04: ದೇವಾಲಯಗಳನ್ನು ಸಮಗ್ರ ಅಭಿವೃದ್ದಿ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕನಸನ್ನು ನನಸು ಮಾಡುವ ನನ್ನ ಉದ್ದೇಶಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ ಆನೆ ಬಲ ತುಂಬಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ. ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ದಿಗೆ 100 ಕೋಟಿ ರೂಪಾಯಿಗಳ ಅನುದಾನ ನೀಡಲಾಗಿದ್ದು, ಈ ಮೂಲಕ ಹನುಮನ ಜನ್ಮಸ್ಥಳ ಅಂಜನಾದ್ರಿಯನ್ನು ಅಯೋಧ್ಯ ಮಾದರಿಯಲ್ಲಿ ಅಭಿವೃದ್ದಿಗೊಳಿಸಲು […]