ಕೇಂದ್ರ ಬಜೆಟ್ ಕುರಿತು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ

ಬೆಂಗಳೂರು, ಫೆ.01, ಮಂಗಳವಾರ: ದೇಶದ ಆರ್ಥಿಕ ವ್ಯವಸ್ಥೆ ಚೇತರಿಕೆಗೆ ಪೂರಕವಾದ ವಾತಾವರಣ ನಿರ್ಮಿಸುವ, ಗ್ರಾಮೀಣ ಮೂಲ ಸೌಕರ್ಯಕ್ಕೆ ಒತ್ತು ನೀಡುವ ಜನಪರ ಬಜೆಟ್ ಇದಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಕೇಂದ್ರ ಸರ್ಕಾರದ ಬಜೆಟ್ ಕುರಿತಂತೆ ಪ್ರತಿಕ್ರಿಯಿಸಿರುವ ಸಚಿವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಬಜೆಟ್ ಇದಾಗಿದೆ. ಜನಸಾಮಾನ್ಯರ ಜೀವನ ಮಟ್ಟ ಸುಧಾರಿಸುವಂತಹ ಬಜೆಟ್ ನಲ್ಲಿ ಉದ್ಯೋಗ ಸೃಷ್ಟಿ, ಬಂಡವಾಳ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸಹಕಾರ ಸಂಘಗಳ ತೆರಿಗೆಯನ್ನು ಕೇಂದ್ರ […]