ಕೊರೊನಾ 3ನೇ ಅಲೆ, ಸೋಂಕಿತರಿಗೆ ಚಿಕಿತ್ಸೆ ನೀಡಲು ಸನ್ನದ್ಧ : ಸಚಿವ ಸುಧಾಕರ್

ಬೆಂಗಳೂರು,ಜ.17-ರಾಜ್ಯದಲ್ಲಿ 3ನೇ ಕೋವಿಡ್ ಅಲೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾವುನೋವು ಹೆಚ್ಚಾಗದಂತೆ ಸೋಂಕಿತರಿಗೆ ಅಗತ್ಯವಾದ ಚಿಕಿತ್ಸೆ ಕೊಡಿಸಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಮ್ಮಾರಿಯನ್ನು ತಡೆಗಟ್ಟಲು ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಸರ್ಕಾರ ಎಲ್ಲವನ್ನು ತೆಗೆದುಕೊಂಡಿದೆ. ಜನರ ಆರ್ಥಿಕ ಚಟುವಟಿಕೆಗಳು ಮತ್ತು ಸಾವುನೋವು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ತಿಳಿಸಿದರು. ಹೆಚ್ಚು ಕೋವಿಡ್ ಟೆಸ್ಟ್‍ಗಳನ್ನು ನಡೆಸಿದಾಗ ಸಹಜವಾಗಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತವೆ. […]