ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಖರೀದಿ ಅಕ್ರಮ : ಸಮಗ್ರ ತನಿಖೆಗೆ ಸಿದ್ಧತೆ

ಬೆಂಗಳೂರು,ಆ.20-ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯ ವೇಳೆ ವಿದ್ಯುತ್ ಖರೀದಿಯಲ್ಲಿ ವ್ಯಾಪಕ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಇದನ್ನು ಸಮಗ್ರವಾಗಿ ತನಿಖೆ ನಡೆಸಲು ಇಂಧನ ಇಲಾಖೆ ಮುಂದಾಗಿದೆ. ಮುಂದಿನ ವಾರ ಇಂಧನ ಇಲಾಖೆಯಿಂದ ತನಿಖೆಗೆ ಅಧಿಕೃತ ಆದೇಶ ಹೊರಬೀಳಲಿದ್ದು, ಪ್ರಮುಖ ನಾಯಕರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆ ಇದೆ. ಈ ಮೂಲಕ 2023ರ ವಿಧಾನಸಭೆ ಚುನಾವಣೆಗೂ ಮುನ್ನವೇ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷ ಏರ್ಪಡುವುದು ಬಹುತೇಕ ಖಚಿತವಾಗಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿದ್ದ ದರವನ್ನು […]