ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವಾಲಯ ನೌಕರರ ಮೌನ ಪ್ರತಿಭಟನೆ

ಬೆಂಗಳೂರು, ಫೆ.24- ಸಚಿವಾಲಯದಲ್ಲಿ ಹೊರಗುತ್ತಿಗೆ ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸರ್ಕಾರದ ಸಚಿವಾಲಯ ನೌಕರರರು ವಿಧಾನಸೌಧ ಮತ್ತು ವಿಕಾಸಸೌಧದ ಮಧ್ಯೆ ಇರುವ ಮಹಾತ್ಮ ಗಾಂೀಧಿಜಿ ಪ್ರತಿಮೆ ಮುಂಭಾಗ ಕಪ್ಪು ಮಾಸ್ಕï ಧರಿಸಿ ಮೌನ ಪ್ರತಿಭಟನೆ ನಡಿಸಿದರು. ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಚಿವಾಲಯದ ಶಾಖಾಕಾರಿಗಳಿಗೆ ತಹಶೀಲ್ದಾರ್ ಹುದ್ದೆಗೆ ನಿಯೋಜನೆ ಮೇರೆಗೆ ಹೋಗಲು ಅವಕಾಶ ನೀಡಬೇಕು. ಹೊರಗುತ್ತಿಗೆ ಸೇವೆಯನ್ನು ರದ್ದುಪಡಿಸಿ, ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ ಮಾಡಬೇಕು […]

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವಾಲಯ ನೌಕರರ ಪ್ರತಿಭಟನೆ

ಬೆಂಗಳೂರು,ಫೆ.23- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘ ನಾಳೆ ಮಧ್ಯಾಹ್ನ ಪ್ರತಿಭಟನಾ ಧರಣಿ ನಡೆಸಲಿದೆ. ವಿಧಾನಸೌಧ-ವಿಕಾಸಸೌಧ ನಡುವೆ ಇರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ನಾಳೆ ಮಧ್ಯಾಹ್ನ 1.30ಕ್ಕೆ ಮೌನ ಪ್ರತಿಭಟನೆ ನಡೆಸಲು ಸಂಘ ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಂಘದ ಅಧ್ಯಕ್ಷ ಡಿ.ಗುರುಸ್ವಾಮಿ, ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಅವಧಿ ಮೀರಿದ ನಿಯೋಜನೆ ಅಥವಾ ಅನ್ಯಕಾರ್ಯ ನಿಮಿತ್ತ ಕಾರ್ಯ ನಿರ್ವಹಿಸುತ್ತಿರುವವರನ್ನು ಮಾತೃ ಇಲಾಖೆಗೆ ಹಿಂದಿರುಗಿಸಬೇಕು. ನಿವೃತ್ತ […]