ಪಾಕ್‍ನಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಿಗೆ ಉಳಿಗಾಲವಿಲ್ಲ ; ಭಾರತ ತಿರುಗೇಟು

ನ್ಯೂಯಾರ್ಕ್,ಮಾ.4-ಯಾವುದೇ ಧಾರ್ಮಿಕ ಅಲ್ಪಸಂಖ್ಯಾತರು ಇಂದು ಪಾಕಿಸ್ತಾನದಲ್ಲಿ ಮುಕ್ತವಾಗಿ ಬದುಕಲು ಮತ್ತು ಅವರ ಧರ್ಮವನ್ನು ಆಚರಿಸಲು ಸಾಧ್ಯವಿಲ್ಲ ಎಂದು ಭಾರತ ವಿಶ್ವಸಂಸ್ಥೆಯಲ್ಲಿ ತಿರುಗೇಟು ನೀಡಿದೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯ ಕುರಿತು ಮಾತನಾಡಿದ ಭಾರತದ ಪ್ರತಿನಿಧಿ ಸೀಮಾ ಪೂಜಾನಿ ಅವರು ಪಾಕ್ ಸಹವರ್ತಿ ಹೀನಾ ರಬ್ಬಾನಿ ಅವರ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪಾಕಿಸ್ತಾನದ ಪ್ರತಿನಿಧಿ ಹೀನಾ ರಬ್ಬಾನಿ ಅವರು ತಮ್ಮ ದೇಶದಲ್ಲಿ ನಡೆಯುತ್ತಿರುವ ಘಟನೆಗಳನ್ನು ಭಾರತದ ವಿರುದ್ಧ ದುರುದ್ದೇಶಪೂರಿತ ಪ್ರಚಾರಕ್ಕಾಗಿ ಈ ಫೋರಂ […]