H3N2 ವೈರಸ್ ಬಗ್ಗೆ ಅನಗತ್ಯ ವದಂತಿ ಹಬ್ಬಿಸಬೇಡಿ : ಸಚಿವ ಸುಧಾಕರ್

ಬೆಂಗಳೂರು,ಮಾ.6- ರಾಜ್ಯಾದ್ಯಂತ ಆತಂಕ ಸೃಷ್ಟಿಸಿರುವ ಹೆಚ್3ಎನ್2 ಸೋಂಕು ಸದ್ಯಕ್ಕೆ ಅಪಾಯಕಾರಿಯಾಗಿ ಪರಿಣಮಿಸಿಲ್ಲ. ಆದರೂ ನಾವು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಸಾರ್ವಜನಿಕರು ಕೂಡ ಮೈಮರೆಯದೆ ಎಚ್ಚರಿಕೆಯಿಂದ ಇರಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಹೆಚ್3ಎನ್2 ಸೋಂಕು ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ತಜ್ಞರ ಜೊತೆಗೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸೋಂಕಿನ ಬಗ್ಗೆ ಕೆಲವರು ಅನಗತ್ಯ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ರಾಜ್ಯದಲ್ಲಿ ಇದು ಕೈ ಮೀರು […]