ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳು

ಮಂಗಳೂರು,ಅ.14- ದುಷ್ಕರ್ಮಿಗಳ ತಂಡವೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರಿಗೆ ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೆ, ಮಾರಕಾಸ್ತ್ರ ತೋರಿ ಜೀವ ಬೆದರಿಕೆಯೊಡ್ಡಿದ್ದಾರೆಂದು ಬಂಟ್ವಾಳ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಕಾರಿನ ಚಾಲಕ ದೂರು ದಾಖಲಿಸಿದ್ದಾರೆ. ಬುಧವಾರ ಬೆಂಗಳೂರಿಗೆ ತೆರಳಿದ್ದ ಶಾಸಕರು ಗುರುವಾರ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಮಂಗಳೂರಿಗೆ ಆಗಮಿಸಿ ಕಾರಿನಲ್ಲಿ ಬೆಳ್ತಂಗಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಗರದ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಸ್ಕಾರ್ಪಿಯೋ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ನಿಂದಿಸಿದ್ದಲ್ಲದೆ, ಮಾರಕಾಸ್ತ್ರ ತೋರಿಸಿ ಬೆದಿರಿಸಿದರೆಂದು ಶಾಸಕ ಪೂಂಜಾ […]