ಸರ್ಕಾರದ ಅಧಿಕೃತ ಆದೇಶಗಳಲ್ಲಿ ಕನ್ನಡ ದೋಷವಾದರೆ ಸಂಬಳ ಕಟ್

ಬೆಂಗಳೂರು,ಜು.18- ರಾಜ್ಯ ಸರ್ಕಾರಿ ನೌಕರರೇ ಎಚ್ಚರ! ಸರ್ಕಾರದ ಆದೇಶಗಳು ಅಥವಾ ಸುತ್ತೋಲೆಗಳನ್ನು ಕನ್ನಡದಲ್ಲಿ ರಚಿಸುವಾಗ ತಪ್ಪು ತಪ್ಪಾಗಿ ಟೈಪಿಂಗ್ ಅಥವಾ ವ್ಯಾಕರಣದಲ್ಲಿ ದೋಷವಾದರೆ, ಸಂಬಳದಲ್ಲಿ ಕಡಿತವಾಗಲಿದೆ, ಮುಂಬಡ್ತಿ ಕೂಡಾ ನಿರಾಕರಿಸಲಾಗುತ್ತದೆ. ಈ ಸಂಬಂಧ ಮುಂಬರುವ ವಿಧಾನಮಂಡಲದ ಉಭಯ ಸದನಗಳಲ್ಲಿ ಕನ್ನಡದ ಸುತ್ತೋಲೆಗಳನ್ನು ತಪ್ಪು ತಪ್ಪಾಗಿ ಮುದ್ರಣ ಮಾಡುವ ಇಲ್ಲವೇ ವ್ಯಾಕರಣ ದೋಷ ಮಾಡುವವರ ಮೇಲೆ ಶಿಸ್ತು ಕ್ರಮ ಜರುಗಿಸಲು ಹಾಲಿ ಇರುವ ನಿಯಮಕ್ಕೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ತಿದ್ದುಪಡಿ ಮಾಡಲು ಮುಂದಾಗಿದೆ. ವಿಧಾನಸಭೆ ಹಾಗೂ ವಿಧಾನಮಂಡದಲ್ಲಿ, […]

ಸರ್ಕಾರಿ ಸುತ್ತೋಲೆಯಲ್ಲಿ ತರಹೆವಾರಿ ತಪ್ಪುಗಳು : ನೆಟ್ಟಿಗರ ಆಕ್ರೋಶ

ಬೆಂಗಳೂರು,ಜು.16- ಮೊದಲೇ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದ್ದ ರಾಜ್ಯ ಸರ್ಕಾರ ಇದೀಗ ಸುತ್ತೋಲೆಯಲ್ಲಿ ಕನ್ನಡದ ವ್ಯಾಕರಣವನ್ನು ತಪ್ಪಾಗಿ ಮುದ್ರಿಸಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ನಿನ್ನೆ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆಯು ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೊ ಮತ್ತು ವಿಡಿಯೋ ಚಿಕ್ರೀರಣ ಮಾಡುವುದನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿತ್ತು. ಕೊನೆಗೆ ಇದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾದ್ದರಿಂದ ತಡರಾತ್ರಿ ಸುತ್ತೋಲೆಯನ್ನು ಹಿಂಪಡೆಯಲಾಗಿದೆ. ಇದೀಗ ಈ ಸುತ್ತೋಲೆಯಲ್ಲೂ ಸಾಕಷ್ಟು ಕನ್ನಡ ವ್ಯಾಕರಣಗಳನ್ನು ತಪ್ಪಾಗಿ ಮುದ್ರಿಸಿ ಕನ್ನಡಿಗರು ಸಿಡಿದೇಳುವಂತೆ ಮಾಡಿದೆ.ಸಾಮಾಜಿಕ ಜಾಲತಾಣಗಳಲ್ಲಂತೂ […]