ಶಾಸಕ ಅರವಿಂದ ಲಿಂಬಾವಳಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

ಬೆಂಗಳೂರು,ಜ.3- ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಕೇಳಿ ಬಂದಿರುವ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರನ್ನು ಬಂಧಿಸುವಂತೆ ಕಾಂಗ್ರೆಸ್ ನಾಯಕರ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿಂದು ಪ್ರದೀಪ್ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಣದೀಪ್ ಸುರ್ಜೆವಾಲಾ, ಪ್ರದೀಪ್ ಸಾವು ಆತ್ಮ ಹತ್ಯೆಯಲ್ಲ, ಅದೊಂದು ಕೊಲೆ. ಅದಕ್ಕೆ ಕಾರಣರಾದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರಿಗೆ ಶಿಕ್ಷೆಯಾಗಬೇಕು. ಕೂಡಲೇ ಅವರನ್ನು ಬಂಧಿಸಿ ಕಂಬಿ ಹಿಂದೆ ಕಳಿಸಬೇಕು ಎಂದು ಒತ್ತಾಯಿಸಿದರು. ಪ್ರದೀಪ್ ಅವರ ಮಗಳು, ಪತ್ನಿಯ ಕಣ್ಣೀರು […]
ಲಿಂಬಾವಳಿ ವಿರುದ್ಧ ಕಾನೂನು ಪ್ರಕಾರ ತನಿಖೆ : ಸಿಎಂ ಬೊಮ್ಮಾಯಿ

ಬೆಂಗಳೂರು,ಜ.2- ಡೆತ್‍ನೋಟ್ ಬರೆದು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಕಾನೂನು ಪ್ರಕಾರವೇ ತನಿಖೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತರ ಪತ್ನಿ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಲವರ ವಿರುದ್ದ ಎಫ್‍ಐಆರ್ ಹಾಕಿದ್ದಾರೆ. ಕಾನೂನು ಪ್ರಕಾರವೇ ತನಿಖೆ ನಡೆಯುವುದರಿಂದ ಸರ್ಕಾರ ಮಧ್ಯಪ್ರವೇಶ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ದೇಶದ ಕಾನೂನು ಎಲ್ಲರಿಗೂ ಒಂದೇ. ನಿಷ್ಪಕ್ಷಪಾತದ ತನಿಖೆ ನಡೆಯಲಿದ್ದು, ಇದರಲ್ಲಿ […]
ಐಟಿ ಕಂಪನಿಗಳಿಂದ ಒತ್ತುವರಿಯಾಗಿಲ್ಲ : ಅರವಿಂದ ಲಿಂಬಾವಳಿ
ಬೆಂಗಳೂರು,ಸೆ.13- ಐಟಿ ಕಂಪನಿಗಳು ಜಾಗ ಒತ್ತುವರಿ ಮಾಡಿಲ್ಲ. ಬಿಲ್ಡರ್‍ಗಳು ಒತ್ತುವರಿ ಮಾಡಿದ್ದಾರೆ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. ಐಟಿ ಕಂಪನಿಗಳು ಜಾಗ ಒತ್ತುವರಿ ಮಾಡಿವೆ ಎಂಬ ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಅದು ತಪ್ಪು ಮಾಹಿತಿ. ಬಿಲ್ಡರುಗಳು ಐಟಿ ಕಂಪನಿಗಳಿಗೆ ಕಟ್ಟಡ ನಿರ್ಮಾಣ ಮಾಡಿಕೊಟ್ಟಿದ್ದಾರೆ. ಹಾಗಾಗಿ ಬಿಲ್ಡರ್‍ಗಳು ಒತ್ತುವರಿ ಮಾಡಿದ್ದಾರೆ. ಈ ಕುರಿತು ಸರ್ವೆ ಕಾರ್ಯ ಈಗಾಗಲೇ ಮುಗಿದಿದೆ ಎಂದು ಹೇಳಿದರು. ಇದನ್ನೂ ಓದಿ : ಅತಿವೃಷ್ಟಿ, ಪ್ರವಾಹ ಕುರಿತ […]