ಯತ್ನಾಳ್‍ಗೆ ಬಿಜೆಪಿ ಹೈಕಮಾಂಡ್ ಮೂಗುದಾರ

ಬೆಂಗಳೂರು,ಜ.20- ಪಂಚಮಸಾಲಿ ಸಮುದಾಯದ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಂಡು ಸರ್ಕಾರಕ್ಕೆ ಮುಜುಗರ ಸೃಷ್ಟಿಸುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಬಿಜೆಪಿ ವರಿಷ್ಠರು ಮಧ್ಯಪ್ರವೇಶಿಸಲು ಮುಂದಾಗಿದ್ದಾರೆ. ಅದರಲ್ಲೂ ಸರ್ಕಾರದ ವಿರುದ್ಧವೇ ಗುಟುರು ಹಾಕುತ್ತಾ ಪ್ರತಿಪಕ್ಷಗಳ ಕೈಗೆ ಅಸ್ತ್ರ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಯಿಗೆ ಬೀಗ ಹಾಕಲು ಬಿಜೆಪಿ ವರಿಷ್ಠರು ಮುಂದಾಗಿದ್ದಾರೆ. ಬಸವ ಕಲ್ಯಾಣದ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿರುವುದರಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗುತ್ತಿರುವುದನ್ನು ಮನಗಂಡು ಕೇಂದ್ರ ವರಿಷ್ಠರ ರಂಗ ಪ್ರವೇಶ ಮಾಡಲು ತೀರ್ಮಾನಿಸಿದ್ದಾರೆ. […]