ಶಾಸಕ ಹರೀಶ್ ಪೂಂಜಾಗೆ ಬೆದರಿಕೆ ಪ್ರಕರಣ ಸಿಐಡಿ ತನಿಖೆಗೆ

ಬೆಂಗಳೂರು,ಅ.18- ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ. ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದರು. ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿದ ಬಳಿಕ ಕಡತಗಳನ್ನು ಪೊಲೀಸರು ಸಿಐಡಿಗೆ ವರ್ಗಾವಣೆ ಮಾಡಿದ್ದಾರೆ. ಕಾರು ಚಾಲಕ ನೀಡಿದ್ದ ದೂರಿನ ಅನ್ವಯ ಪಳ್ನೀರ್ […]