ಪೊಲೀಸರನ್ನು ನಾನು ನಿಂದಿಸಿಲ್ಲ : ಶಾಸಕ ಕುಮಾರಸ್ವಾಮಿ

ಬೆಂಗಳೂರು,ಜ.28- ನಾನು ಯಾವುದೇ ಪೊಲೀಸರ ಮೇಲೆ ಹಲ್ಲೆ ನಡೆಸುವುದಾಗಲಿ ಅಥವಾ ಅವರನ್ನು ಅವಾಚ್ಯಶಬ್ಧಗಳಿಂದ ನಿಂದಿಸಿಲ್ಲ. ಇವೆಲ್ಲವೂ ಕಟ್ಟುಕತೆ ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಕಳೆದ ರಾತ್ರಿ ಶಾಸಕರ ಭವನದ ಬಳಿ ನಡೆದ ಘಟನೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಪೊಲೀಸರ ಜತೆ ಅನುಚಿತವಾಗಿ ವರ್ತಿಸಿಲ್ಲ. ಅದಲ್ಲೆ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿಲ್ಲ. ನನ್ನ ರಾಜಕೀಯ ಏಳಿಗೆ ಸಹಿಸದ ಕೆಲವರು ಇಂತಹ ಷಡ್ಯಂತ್ರ ರೂಪಿಸಿದ್ದಾರೆ ಎಂದು ಹೇಳಿದರು. ಪ್ರಾಯಶಃ ಪೊಲೀಸರಿಗೆ ನಾನು ಶಾಸಕ ಎಂಬುದು […]