MP ಪ್ರತಾಪ್ ಸಿಂಹ ವಿರುದ್ಧ ಸಿಎಂಗೆ MLA ರಾಮದಾಸ್ ದೂರು

ಬೆಂಗಳೂರು,ನ.16-ಒಂದು ಧರ್ಮದ ವಿರುದ್ಧ ಅನಗತ್ಯವಾಗಿ ಪ್ರಚೋದನೆ ನೀಡುತ್ತಿರುವುದು ಹಾಗೂ ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಕರೆದು ಬುದ್ದಿ ಹೇಳಬೇಕೆಂದು ಶಾಸಕ ರಾಮದಾಸ್ ಅವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ. ಬುಧವಾರ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕರೂ ಆಗಿರುವ ರಾಮದಾಸ್, ಸಂಸದ ಪ್ರತಾಪ್ ಸಿಂಹ ಅವರಿಗೆ ಕಡಿವಾಣ ಹಾಕದಿದ್ದರೆ ಪಕ್ಷಕ್ಕೆ ಮಾರಕ ಆಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುಂಬಜ್ ಮಾದರಿಯ ಬಸ್ ನಿಲ್ದಾಣಗಳನ್ನು ತೆರವುಗೊಳಿಸದಿದ್ದರೆ ನಾನೇ […]