ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕೆ ರೇಣುಕಾಚಾರ್ಯ ಕ್ಷಮೆಯಾಚನೆ

ಬೆಂಗಳೂರು,ಜ.11- ನಾನು ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ನನ್ನ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಜನಸಾಮಾನ್ಯರಿಗೊಂದು, ಜನಪ್ರತಿನಿಗಳಿಗೊಂದು ನಿಯಮವಿಲ್ಲ. ನಾನು ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿದ್ದೇನೆ. ಇದಕ್ಕಾಗಿ ಕ್ಷಮೆಯನ್ನು ಕೇಳುತ್ತೇನೆ. ನನ್ನ ಕ್ಷೇತ್ರದ ಕಾರ್ಯಕರ್ತರ ಮೇಲೆ ಪೊಲೀಸರು ದೂರು ದಾಖಲಿಸುವುದು ಬೇಡ. ಎಲ್ಲವನ್ನು ನಾನು ಎದುರಿಸಲು ಸಿದ್ದವಿದ್ದೇನೆ. ತಕ್ಷಣವೇ ನನ್ನ ವಿರುದ್ಧ ಎಫ್‍ಐಆರ್ ದಾಖಲಿಸಲಿ. ಈ ನೆಲದ ಕಾನೂನನ್ನು ಗೌರವಿಸುತ್ತೇನೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ […]