ಆಪ್ತರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರವಾಸ

ಬೆಂಗಳೂರು,ಜ.10- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೋಲಾರವನ್ನು ತಮ್ಮ ಕ್ಷೇತ್ರವನ್ನು ಪಕ್ಕಾ ಮಾಡಿಕೊಂಡ ಬಳಿಕ, ತಮಗಾಗಿ ಕ್ಷೇತ್ರ ಬಿಟ್ಟುಕೊಡಲು ಮುಂದಾಗಿದ್ದ ಆಪ್ತರ ನೆರವಿಗೆ ಧಾವಿಸಲು ಮುಂದಾಗಿದ್ದಾರೆ. ಪ್ರಸ್ತುತ ಶಾಸಕರಾಗಿರುವ ಬಾದಾಮಿಯಿಂದ ಸ್ಪರ್ಧೆ ಮಾಡಲು ಸಿದ್ದರಾಮಯ್ಯ ಹಿಂದೇಟು ಹಾಕುತ್ತಿದ್ದಂತೆ, ಅವರಿಗಾಗಿ ಹಲವಾರು ಮಂದಿ ಶಾಸಕರು ಮತ್ತು ಮಾಜಿ ಶಾಸಕರು ತಮ್ಮ ಕ್ಷೇತ್ರ ಬಿಟ್ಟುಕೊಡಲು ಮುಂದಾಗಿದ್ದರು. ಅವರಲ್ಲಿ ಪ್ರಮುಖವಾಗಿ ಚಾಮರಾಜಪೇಟೆಯ ಶಾಸಕ ಜಮೀರ್ ಅಹಮದ್‍ಖಾನ್ ಕೂಡ ಒಬ್ಬರು. ನಿನ್ನೆಯಷ್ಟೆ ಸಿದ್ದರಾಮಯ್ಯ ಕೋಲಾರದಿಂದ ಕಣಕ್ಕಿಳಿಯುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿ ಎಲ್ಲಾ ಗೊಂದಲಗಳಿಗೆ ತೆರೆ […]

ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬುದು ಜನರ ಅಪೇಕ್ಷೆ : ಶಾಸಕ ಜಮೀರ್

ಬೆಂಗಳೂರು,ಡಿ.5- ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು ಎಂಬುದು ಜನರ ಅಪೇಕ್ಷೆ. ಅದನ್ನು ನಾನು ಈಗಲೂ ಹೇಳುತ್ತೇನೆ. ನನ್ನ ಹೇಳಿಕೆಗೆ ನಾನೀಗಲೂ ಬದ್ದ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಜನನಾಯಕರು. ಅವರ ಬಗ್ಗೆ ಜನರ ಒಲವಿದೆ. ಇದರಲ್ಲಿ ಎರಡು ಮಾತಿಲ್ಲ. ಅವರು ಮುಖ್ಯಮಂತ್ರಿಯಾಗಬೇಕು ಎಂಬುದು ನನ್ನ ಬಯಕೆ ಎಂದು ತಿಳಿಸಿದರು. ವಿಶ್ವಕಪ್ ಪುಟ್ಬಾಲ್ ಕ್ವಾರ್ಟರ್ ಫೈನಲ್ ತಲುಪಿದ ಇಂಗ್ಲೆಂಡ್ ಚಾಮರಾಜಪೇಟೆಯಲ್ಲಿ ಬಿಜೆಪಿಯವರು ರೌಡಿ ಸೈಲೆಂಟ್ ಸುನೀಲ ನನ್ನೇ ನಿಲ್ಲಿಸಲಿ, ಜೆಡಿಎಸ್‍ನ […]

ಈದ್ಗಾ ಮೈದಾನದಲ್ಲಿ ಅದ್ದೂರಿಯಾಗಿ ಸ್ವಾತಂತ್ರ್ಯೋತ್ಸವ ಆಚರಿಸುತ್ತೇವೆ : ಜಮೀರ್

ಬೆಂಗಳೂರು,ಆ.8- ಚಾಮರಾಜಪೇಟೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಈದ್ಗಾ ಆಟದ ಮೈದಾನದಲ್ಲಿ ಈ ವರ್ಷ ಆಗಸ್ಟ್ 15ರಂದು ಧ್ವಜಾರೋಹಣ ಮಾಡಿ ಅತ್ಯಂತ ಸಡಗರದಿಂದ ಸ್ವಾತಂತ್ರ್ಯೋತ್ಸವ ಆಚರಿಸಲಿದ್ದೇವೆ ಎಂದು ಶಾಸಕ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಧ್ವಜಾರೋಹಣ ಕಾರ್ಯಕ್ರಮದ ಸಿದ್ಧತೆಗೆ ಇಂದು ಚಾಮರಾಜಪೇಟೆಯ ಆಟದ ಮೈದಾನವನ್ನು ವೀಕ್ಷಿಸಿದ ಬಳಿಕ ಪತ್ರಕರ್ತರ ಪ್ರಶ್ನೆಗೆ ಅವರು ಉತ್ತರಿಸಿದರು. ಮಾಧ್ಯಮದವರು ದಯವಿಟ್ಟು ಗೊಂದಲ ಸೃಷ್ಟಿಸಬೇಡಿ. ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಹಾಗೂ ಕನ್ನಡ ರಾಜ್ಯೋತ್ಸವದಂದು ಚಾಮರಾಜಪೇಟೆಯ ಆಟದ ಮೈದಾನದಲ್ಲಿ ಇನ್ನು ಮುಂದೆ ಪ್ರತಿ ವರ್ಷ ಧ್ವಜಾರೋಹಣ […]