ಸಿಎಂರಿಂದ ನನಗೆ ನ್ಯಾಯ ಸಿಗುವ ಭರವಸೆ: ಆರ್ .ಶಂಕರ್
ಬೆಂಗಳೂರು,ಫೆ.4- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ನನಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ವಿಧಾನಪರಿಷತ್ ಸದಸ್ಯ ಆರ್ .ಶಂಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಚನೆಯಲ್ಲಿ ನನ್ನ ಪಾತ್ರವು ಇದೆ. ಇದನ್ನುಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಅವರು ತಾಳ್ಮೆಯಿಂದ ಇರುವಂತೆ ಹೇಳಿದ್ದಾರೆ. ಖಂಡಿತವಾಗಿಯೂ ನನಗೆ ನ್ಯಾಯ ಸಿಗುವ ಭರವಸೆ ನೀಡಿದರು. ಮುಂದಿನ ಸಂಪುಟ ವಿಸ್ತರಣೆ ಸಮಯದಲ್ಲಿ ನನ್ನನ್ನೂ ಮಂತ್ರಿ ಮಾಡುತ್ತಾರೆ ಎಂಬ ವಿಶ್ವಾಸವಿದೆ. 100ಕ್ಕೆ 100ರಷ್ಟು ನನಗೆ ಭರವಸೆ ಇದೆ. ಸಿಎಂ ಒಳ್ಳೆಯದಾಗಲಿದೆ ಎಂದಿದ್ದಾರೆ. […]