ಮತ್ತೆ ಸಾಲದ ಮೇಲಿನ ಬಡ್ಡಿ ದರ ಹೆಚ್ಚಳ ಸಾಧ್ಯತೆ

ನವದೆಹಲಿ,ಡಿ.5- ಮತ್ತೆ ರೆಪೋ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಸಾಲದ ಬಡ್ಡಿ ದರ ಹೆಚ್ಚಳವಾಗುವ ಆತಂಕ ಎದುರಾಗಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಹಣಕಾಸು ನೀತಿ ಸಮಿತಿ ಸಭೆ ಇಂದಿನಿಂದ ಆರಂಭಗೊಂಡಿದ್ದು, ಮೂರು ದಿನಗಳ ಕಾಲ ನಡೆಯಲಿದೆ. ಸಭೆಯಲ್ಲಿ ಕೈಗೊಳ್ಳುವ ನಿರ್ಣಯಗಳನ್ನು ಬುಧವಾರ ಪ್ರಕಟಗೊಳಿಸಲಾಗುವುದು. ಹೆಚ್ಚುತ್ತಿರುವ ಹಣದುಬ್ಬರವನ್ನು ತಗ್ಗಿಸಲು ಇನ್ನಿಲ್ಲದ ಹರಸಾಹಸ ನಡೆಸುತ್ತಿರುವ ಆರ್‍ಬಿಐ ಈ ಬಾರಿಯೂ ರೆಪೋ ದರ ಹೆಚ್ಚಳ ಮಾಡುವ ಸಾಧ್ಯತೆ ಎಂದು ಹಣಕಾಸು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಳೆದ ಸೆಪ್ಟೆಂಬರ್‍ನಲ್ಲಿ ಪ್ರಕಟಿಸಿದ್ದ ಹಣಕಾಸು […]