ಕಲಾಪದಲ್ಲಿ ಪಾಲ್ಗೊಳ್ಳಲು ಬಿಜೆಪಿ ಶಾಸಕರ ನಿರಾಸಕ್ತಿ

ಬೆಂಗಳೂರು,ಸೆ.14- ಮಳೆಗಾಲದ ಅಧಿವೇಶನ ಆರಂಭವಾಗಿದ್ದರೂ ಪ್ರತಿಪಕ್ಷಗಳಿಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಶಾಸಕರಲ್ಲಿ ಸಂಭ್ರಮ, ಉತ್ಸಾಹ, ಲವಲವಿಕೆ ಕಾಣದೆ ಗರಬಡಿದ ಸ್ಥಿತಿ ಕಲಾಪದಲ್ಲಿ ಕಂಡುಬರುತ್ತಿದೆ. ಅಧಿವೇಶನ ಆರಂಭವಾಗಿ ಎರಡು ದಿನವಾದರೂ ಆಡಳಿತಾರೂಢ ಬಿಜೆಪಿ ಶಾಸಕರಲ್ಲಿ ಹಿಂದೆ ಇದ್ದಂತಹ ಉತ್ಸಾಹ ಕಂಡುಬರುತ್ತಿಲ್ಲ ಬರಬೇಕೆಂಬ ಒತ್ತಡಕ್ಕಾಗಿ ಸದನಕ್ಕೆ ಬರುತ್ತಿದ್ದಾರೆ ಹೊರತು ಗಂಭೀರ ಚರ್ಚೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಕಳೆದ ಎರಡು ದಿನಗಳಿಂದ ಬಿಜೆಪಿಯ 121 ಶಾಸಕರ ಪೈಕಿ ಕನಿಷ್ಟ ಪಕ್ಷ ಸದನಕ್ಕೆ 50 ಶಾಸಕರು ಕೂಡ ಹಾಜರಾಗಿಲ್ಲ. ಮೊದಲ ಸಾಲಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, […]

ಸೆ.12 ರಿಂದ 10 ದಿನ ಅಧಿವೇಶನ

ಬೆಂಗಳೂರು,ಆ.25- ಮುಂಬರುವ ಮಳೆಗಾಲದ ಅಧಿವೇಶನವು ಸೆ.12ರಿಂದ 10 ದಿನಗಳ ಕಾಲ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು. ಸೆ.12ರಿಂದ 10 ದಿನಗಳ ಕಾಲ ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ತುಮಕೂರು ಜಿಲ್ಲೆ ಶಿರಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಸರ್ಕಾರ 5 ಲಕ್ಷ ರೂ. ಪರಿಹಾರ ನೀಡಿದೆ. ಗಾಯಾಳುಗಳಿಗೆ ಸರ್ಕಾರದ ವತಿಯಿಂದಲೇ ಚಿಕಿತ್ಸೆ ನೀಡಲಾಗುವುದು ಎಂದು ಸಚಿವ ಸಂಪುಟ ಸಭೆಯ […]

ಕರ್ನಾಟಕದಲ್ಲಿ ಮತ್ತೆ ಮುಂಗಾರು ಅಬ್ಬರ, ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು,ಆ.22- ಕರ್ನಾಟಕದಲ್ಲಿ ಮತ್ತೆ ಮುಂಗಾರು ಅಬ್ಬರಿಸುವ ಲಕ್ಷಣಗಳಿದ್ದು, ಮುಂದಿನ ಐದು ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿ ಸಮುದ್ರಮಟ್ಟದಲ್ಲಿ ಉಂಟಾಗಿರುವ ಹವಾಮಾನ ವೈಪರಿತ್ಯದಿಂದ ರಾಜ್ಯದಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿವೆ. ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆ.26ರವರೆಗೆ ಸಾಧಾರಣದಿಂದ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಈ ಕಾರಣದಿಂದ ಇಷ್ಟು ಜಿಲ್ಲೆಗಳಿಗೆ ಯೆಲ್ಲೋ […]

ಆಡಳಿತ -ಪ್ರತಿಪಕ್ಷಗಳ ರಾಜಕೀಯ ಮೇಲಾಟಕ್ಕೆ ಅಧಿವೇಶನದ ಸಮಯ ವ್ಯರ್ಥ

ನವದೆಹಲಿ, ಜು.28- ಬೆಲೆ ಏರಿಕೆ, ಅಗತ್ಯ ವಸ್ತುಗಳ ಮೇಲೆ ಜಿಎಸ್‍ಟಿ ವಿಧಿಸುತ್ತಿರುವುದು ಸೇರಿದಂತೆ ಹಲವು ಗಂಭೀರ ವಿಷಯಗಳು ಇಂದು ಕೂಡ ಚರ್ಚೆಯಾಗದೆ ಸಂಸತ್ ಕಲಾಪ ಪದೇ ಪದೇ ಮುಂದೂಡಿಕೆಯಾಗಿದೆ. ಜುಲೈ 18ರಿಂದ ಆರಂಭವಾದ ಸಂಸತ್‍ನ ಉಭಯ ಸದನಗಳ ಕಲಾಪದಲ್ಲಿ ಈವರೆಗೂ ಸುಗಮ ಕಲಾಪ ನಡೆದೆ ಇಲ್ಲ. ಪ್ರತಿಪಕ್ಷಗಳಾದ ಕಾಂಗ್ರೆಸ್, ಸಿಪಿಎಂ, ಟಿಎಂಸಿ, ಟಿಎಸ್‍ಆರ್, ಡಿಎಂಕೆ ಸೇರಿದಂತೆ ಹಲವು ಪಕ್ಷಗಳು ಸಂಸತ್‍ನಲ್ಲಿ ಹಣದುಬ್ಬರ, ಮೊಸರು ಹಾಗೂ ಇತರ ದಿನ ಬಳಕೆಯ ವಸ್ತುಗಳ ಮೇಲೆ ಜಿಎಸ್‍ಟಿ ವಿಧಿಸಿರುವುದು, ಸೇನೆಗೆ ಅಗ್ನಿಪಥ್ […]

ಜುಲೈ–ಆಗಸ್ಟ್‌ನಲ್ಲಿ ನಡೆಯಬೇಕಿದ್ದ ಮುಂಗಾರು ಅಧಿವೇಶನ ಮುಂದೂಡಿಕೆ

ಬೆಂಗಳೂರು,ಜು.27- ಸದ್ಯಕ್ಕೆ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಯುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಸಾಮಾನ್ಯವಾಗಿ ಜುಲೈ-ಆಗಸ್ಟ್‍ನಲ್ಲಿ ನಡೆಸಬೇಕಾಗಿದ್ದ ಮುಂಗಾರು ಅಧಿವೇಶನವನ್ನು ಸರ್ಕಾರ ಮುಂದೂಡಿದೆ. ವಾಡಿಕೆಯಂತೆ ಜುಲೈನಲ್ಲಿ ನಡೆಯಬೇಕಾಗಿದ್ದ ಮುಂಗಾರು ಅಧಿವೇಶನ ನಡೆಸಬೇಕಿತ್ತು. ಬಸವರಾಜ್ ಬೊಮ್ಮಾಯಿ ಸರ್ಕಾರದ ವರ್ಷದ ಸಂಭ್ರಮ ಹಾಗೂ ಪಕ್ಷ ಸಂಘಟನೆ ಹಿನ್ನೆಲೆ ಜುಲೈ ತಿಂಗಳಲ್ಲಿ ಅಧಿವೇಶನ ನಡೆಸದಿರಲು ನಿರ್ಧರಿಸಿತ್ತು. ಇದೀಗ ಆಗಸ್ಟ್ ತಿಂಗಳಲ್ಲೂ ನಡೆಸದಿರಲು ತೀರ್ಮಾನಿಸಲಾಗಿದೆ. ಅಲ್ಲದೇ, ಸೆಪ್ಟೆಂಬರ್ನಲ್ಲಿ ನಡೆಸುವ ಆಲೋಚನೆಯಲ್ಲಿ ಸರ್ಕಾರವಿದೆ ಎಂದು ತಿಳಿದು ಬಂದಿದೆ. ಈ ಎರಡು ತಿಂಗಳ ಕಾಲ ಆಡಳಿತಾರೂಢ […]

ಇಂದೂ ನಡೆಯದ ಕಲಾಪ: ಪದೇ ಪದೆ ಅಧಿವೇಶನ ಮುಂದೂಡಿಕೆ

ನವದೆಹಲಿ,ಜು.22-ದೈನಂದಿನ ಅಗತ್ಯ ವಸ್ತುಗಳ ಮೇಲೆ ಜಿಎಸ್‍ಟಿ ವಿಧಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳು ಸಂಸತ್‍ನಲ್ಲಿ ಗದ್ದಲ ಎಬ್ಬಿಸಿದ್ದರಿಂದ ಪದೇ ಪದೆ ಕಲಾಪ ಮುಂದೂಡಿಕೆಯಾಯಿತು. ಲೋಕಸಭೆಯಲ್ಲಿ ಪ್ರತಿಪಕ್ಷಗಳು ತೆರಿಗೆ ಏರಿಕೆ ಮತ್ತು ಹಣದುಬ್ಬರ ಹೆಚ್ಚಳ ವಿರೋಧಿಸಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ್ದರಿಂದಾಗಿ ಮಧ್ಯಾಹ್ನ 12 ಗಂಟೆಗೆ ಒಮ್ಮೆ ಕಲಾಪವನ್ನು ಮುಂದೂಡಲಾಯಿತು. ಮತ್ತೆ ಸದನ ಸಮಾವೇಶಗೊಂಡಾಗಲೂ ಗದ್ದಲ ಮುಂದುವರೆದಿದ್ದರಿಂದ ಮಧ್ಯಾಹ್ನ 2 ಗಂಟೆಗೆ ಕಲಾಪ ಮುಂದೂಡಲಾಗಿದೆ. ಇತ್ತ ರಾಜ್ಯಸಭೆಯಲ್ಲೂ ಪ್ರತಿಪಕ್ಷಗಳ ಪ್ರತಿರೋಧ ತೀವ್ರವಾಗಿದ್ದು, ಬೆಲೆ ಏರಿಕೆ ಮತ್ತು ಜಿಎಸ್‍ಟಿ ವಿಧಿಸಿರುವುದರ ವಿರುದ್ಧ ಚರ್ಚೆಗೆ […]

3ನೇ ದಿನವೂ ಪ್ರತಿಪಕ್ಷಗಳು ಗದ್ದಲ, ಸಂಸತ್‍ ಕಲಾಪ ಮುಂದೂಡಿಕೆ

ನವದೆಹಲಿ,ಜು.20- ಜಿಎಸ್‍ಟಿ ಏರಿಕೆ, ಹಣದುಬ್ಬರ, ಅಗ್ನಿಪಥ್ ಯೋಜನೆ ವಿರೋಸಿ ಮೂರನೆ ದಿನವೂ ಪ್ರತಿಪಕ್ಷಗಳು ಗದ್ದಲ, ಕೋಲಾಹಲ, ಪ್ರತಿಭಟನೆ ವ್ಯಕ್ತಪಡಿಸಿದ್ದರಿಂದ ಸಂಸತ್‍ನ ಉಭಯ ಸದನಗಳ ಕಲಾಪ ಮಧ್ಯಾಹ್ನದವರೆಗೂ ಮುಂದೂಡಿಕೆಯಾಗಿದೆ. ಸೋಮವಾರದಿಂದ ಆರಂಭಗೊಂಡ ಸಂಸತ್ ಅಧಿವೇಶನದಲ್ಲಿ ಯಾವುದೇ ಫಲಪ್ರದ ಚರ್ಚೆಯಾಗದೆ ಸಮಯ ವ್ಯರ್ಥವಾಗುತ್ತಿದೆ. ಕೇಂದ್ರ ಸರ್ಕಾರ ಆಹಾರ ಪದಾರ್ಥಗಳ ಮೇಲೆ ಜಿಎಸ್‍ಟಿ ವಿಧಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳು ಪ್ರತಿಭಟನೆಗಿಳಿದಿವೆ. ಸಂಸತ್‍ನ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಪ್ರತಿಪಕ್ಷಗಳು ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿವೆ. ಸಂಸತ್ ಒಳಗೆ ಕಾಂಗ್ರೆಸ್, ಡಿಎಂಕೆ, ಎಎಪಿ, […]

ರಾಜ್ಯದಲ್ಲಿ ತಗ್ಗಿದ ವರುಣನ ಆರ್ಭಟ

ಬೆಂಗಳೂರು,ಜು.19- ರಾಜ್ಯದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದರೂ ನದಿಗಳ ಪ್ರವಾಹ ಮಾತ್ರ ನಿಂತಿಲ್ಲ. ಕಳೆದ ಮೂರು ವಾರಗಳಿಂದ ಆರ್ಭಟಿಸುತ್ತಿದ್ದ ಮುಂಗಾರು ಮಳೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ತುಸು ಕಡಿಮೆಯಾಗಿದೆ. ಉಳಿದಂತೆ ರಾಜ್ಯದ ಒಳನಾಡಿನಲ್ಲಿ ಹಗುರ ಮಳೆಯಾದ ವರದಿಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಕಲ್ಯಾಣ ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾದ ವರದಿಯಾಗಿಲ್ಲ. ಆದರೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಸಾಧಾರಣ ಪ್ರಮಾಣದ ಮಳೆ ಮುಂದುವರೆದಿದೆ. ನಿರಂತರವಾಗಿ ಈ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ನದಿಗಳ ಪ್ರವಾಹ ಮುಂದುವರೆದಿದೆ. ಜಲಾಶಯಗಳ […]

ಬೆಲೆ ಏರಿಕೆ ವಿರೋಧಿಸಿ ಸಂಸತ್ ಭವನದ ಮುಂದೆ ಪ್ರತಿಭಟನೆ

ನವದೆಹಲಿ, ಜು.19- ಅಗತ್ಯ ವಸ್ತುಗಳ ಬೆಲೆ ಏರಿಕೆ, ದುಬಾರಿ ಜಿಎಸ್‍ಟಿ ದರ ವಿರೋಧಿಸಿ ಪ್ರತಿಪಕ್ಷಗಳು ಇಂದು ಸಂಸತ್ ಭವನದ ಮುಂದಿನ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆದಿದ್ದು, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕೋಲಾಹಲದ ವಾತಾವರಣ ನಿರ್ಮಾಣವಾಗಿ ಮಧ್ಯಾಹ್ನದ ವೇಳೆಗೆ ಕಲಾಪ ಮುಂದೂಡಿಕೆಯಾಗಿದೆ. ಸಂಸತ್ ಆವರಣದಲ್ಲಿನ ಮಹಾತ್ಮಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಚತುರ್ವೇದಿ ಸೇರಿದಂತೆ ಅನೇಕ ನಾಯಕರು […]

ರಾಜ್ಯದಲ್ಲಿ ನಿಲ್ಲದ ಮುಂಗಾರು ಮಳೆ ಆರ್ಭಟ

ಬೆಂಗಳೂರು,ಜು.18- ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮಲೆನಾಡು ಭಾಗದಲ್ಲೂ ಮಳೆ ಮುಂದುವರೆದಿದೆ. ಸದ್ಯಕ್ಕೆ ಮಳೆ ಬಿಡುವ ಕೊಡುವ ಸೂಚನೆಗಳು ಕಂಡುಬರುತ್ತಿಲ್ಲ. ಆದರೆ ಮಳೆಯ ಆರ್ಭಟ ಇಳಿಕೆಯಾಗುವ ಸಾಧ್ಯತೆಗಳು ಹೆಚ್ಚಾಗಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಮಹಾರಾಷ್ಟ್ರ ಭಾಗದಲ್ಲಿ ಟ್ರಪ್ ನಿರ್ಮಾಣವಾಗಿರುವುದರಿಂದ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ತಗ್ಗಿದ್ದರೂ ಮಳೆ ನಿಲ್ಲುವ ಸೂಚನೆಗಳಿಲ್ಲ. […]