ಪಠ್ಯದಲ್ಲಿ ಸಂಸ್ಕಾರ, ಸಂಸ್ಕೃತಿ ಅಳವಡಿಸುವಂತೆ ಮಠಾಧೀಶರ ಸಲಹೆ

ಬೆಂಗಳೂರು,ಜ.9- ಪ್ರಾಥಮಿಕ ಶಾಲಾ ಪಠ್ಯಗಳಲ್ಲಿ ಮಕ್ಕಳಿಗೆ ನೈತಿಕ ಮಾನವೀಯ ಮೌಲ್ಯಗಳು, ದೈವಭಕ್ತಿ, ದೇಶಭಕ್ತಿ ಹಾಗೂ ಸಂವಿಧಾನಕ್ಕೆ ಗೌರವ ಕೊಡುವ ಶಿಕ್ಷಣವನ್ನು ಅಳವಡಿಸಬೇಕೆಂದು ನಾಡಿನ ವಿವಿಧ ಮಠಾಧೀಶರು ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ಪಠ್ಯ ಪುಸ್ತಕದಲ್ಲಿ ಅಳವಡಿಸಬೇಕಾದ ಕುರಿತು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸಿರಿಗೇರಿ ಮಠದ ಶ್ರೀ ಶಿವಾಚಾರ್ಯ ಸ್ವಾಮೀಜಿ, ಆದಿಚುಂಚನಗಿರಿ ಪೀಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಆರ್ಟ್ ಆಫ್ ಲಿವಿಂಗ್ನ ರವಿಶಂಕರ್ ಗುರೂಜಿ, ವಿಧಾನಸಭೆ […]