3 ತಿಂಗಳಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಾರ್ವಜನಿಕರಿಗೆ ಸಮರ್ಪಣೆ

ಬೆಂಗಳೂರು,ಫೆ.17- ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಮಲೀಯೂರು ಮತ್ತು ತಲಕಾಡು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮೂರು ತಿಂಗಳೊಳಗೆ ಸಾರ್ವಜನಿಕರಿಗೆ ಸಮರ್ಪಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದರು. ಶಾಸಕ ಅಶ್ವಿನ್‍ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಕಟ್ಟಡದ ಕಾಮಗಾರಿ ಮುಕ್ತಾಯ ಹಂತದಲ್ಲಿ ಇದೆ. ಆದರೆ, ಆಸ್ಪತ್ರೆಯಲ್ಲಿ ಸಿಬ್ಬಂದಿ ಮತ್ತು ಯಂತ್ರೋಪಕರಣಗಳ ಕೊರತೆ ಎದುರಾಗಿರುವುದರಿಂದ ವಿಳಂಬವಾಗಿದ್ದು, ಮೂರು ತಿಂಗಳೊಳಗೆ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ ಎಂದರು. ಈ […]