ಸ್ವಪಕ್ಷೀಯರ ಮೇಲೆ ಮತ್ತೆ ರೇಣುಕಾಚಾರ್ಯ ಟೀಕೆ

ಬೆಂಗಳೂರು,ಜ.30- ಶಾಸಕರ ಮನವಿಗೆ ಸ್ಪಂದಿಸದ ಹಾಗೂ ಕ್ಷೇತ್ರದ ಕೆಲಸ ಮಾಡಿಕೊಡದ ಕೆಲವ ದುರಹಂಕಾರಿ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮತ್ತೆ ಸಿಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಸಚಿವರು ತಮ್ಮಿಂದಲೇ ಸರ್ಕಾರ ಬಂದಿದೆ. ತಮ್ಮಿಂದಲೇ ಎಲ್ಲವೂ ನಡೆಯುತ್ತದೆ ಎಂಬ ಅಹಂನಲ್ಲಿದ್ದಾರೆ. ಇಂತಹ ದುರಾಹಂಕಾರಿ ಸಚಿವರನ್ನು ತತ್‍ಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮನವಿ ಮಾಡಿದರು. ನಾನು ಎಲ್ಲ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಕೆಲವು ಸಚಿವರು ನಮ್ಮ ಮನವಿಗೆ ಸ್ಪಂದಿಸಿ ನಮ್ಮನ್ನು […]