ನಟ ಶಶಿಕುಮಾರ್, ಮುದ್ದಹನುಮೇಗೌಡ ಸೇರಿ ಕಮಲ ಮುಡಿದ ಹಲವು ನಾಯಕರು

ಬೆಂಗಳೂರು,ನ.3- ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಸೇರಿದಂತೆ ಮತ್ತಿತರರು ಅಧಿಕೃತವಾಗಿ ಕಮಲವನ್ನು ಮುಡಿಗೇರಿಸಿಕೊಂಡರು. ಮುದ್ದಹನುಮೇಗೌಡರ ಜತೆ ಮಾಜಿ ಸಂಸದ ಹಾಗೂ ಜೆಡಿಎಸ್‍ನಲ್ಲಿದ್ದ ನಟ ಶಶಿಕುಮಾರ್, ನಿವೃತ್ತ ಐಎಎಸ್ ಅಧಿಕಾರಿ ಅನಿಲ್‍ಕುಮಾರ್ ಮತ್ತು ಬೆಂಬಲಿಗರು ಬಿಜೆಪಿಗೆ ಸೇರ್ಪಡೆಯಾದರು.ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಚಿವರು, ಶಾಸಕರ ಸಮ್ಮುಖದಲ್ಲಿ ಸೇರ್ಪಡೆಯಾಗಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡರು. ಈ ಹಿಂದೆ […]