ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣ ಕೈಬಿಟ್ಟ ಸಚಿವ ಮುನಿರತ್ನ

ಬೆಂಗಳೂರು,ಮಾ.20- ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿದ್ದ ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣದಿಂದ ಸಚಿವ ಮುನಿರತ್ನ ಹಿಂದೆ ಸರಿದಿದ್ದಾರೆ. ಮಂಡ್ಯದಲ್ಲಿ ಆದಿಚುಂಚನಗಿರಿ ಪೀಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿಯಾಗಿ ಚಿತ್ರ ನಿರ್ಮಾಣ ಸಂಬಂಧ ಮಾತುಕತೆ ನಡೆಸಿದ ಬಳಿಕ ಚಿತ್ರ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಕೈಬಿಟ್ಟಿದ್ದಾರೆ. ಶ್ರೀಗಳನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, ಉರಿಗೌಡ-ನಂಜೇಗೌಡ ವಿಚಾರದಲ್ಲಿ ಒಂದಷ್ಟು ದಾಖಲೆ ಸಿಗುತ್ತಿವೆ, ಒಂದಷ್ಟು ಸಿಗುತ್ತಿಲ್ಲ. ಯಾರ ಮನಸ್ಸು ನೋಯಿಸುವ ಉದ್ದೇಶ ನನ್ನದಲ್ಲ. ನಾನು ಈ ಸಿನಿಮಾವನ್ನು ಇಲ್ಲಿಗೆ ಕೈ ಬಿಡುತ್ತೇನೆ […]

ವಿಜಯಪುರದಲ್ಲಿ ವೈನ್‍ಪಾರ್ಕ್ ನಿರ್ಮಾಣ

ಬೆಂಗಳೂರು, ಫೆ.21-ಸ್ಥಳೀಯ ದ್ರಾಕ್ಷಿ ಬೆಳೆಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಜಯಪುರ ನಗರದಲ್ಲಿ 141 ಎಕರೆ ವಿಸ್ತೀರ್ಣದಲ್ಲಿ ವೈನ್ ಪಾರ್ಕ್ ನಿರ್ಮಿಸಲಾಗುವುದು ಎಂದು ತೋಟಗಾರಿಕಾ ಸಚಿವ ಮುನಿರತ್ನ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ದೇವಾನಂದ ಪೂಲಸಿಂಗ್ ಚವ್ಹಾಣ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ವಿಜಯಪುರ, ಬೆಳಗಾವಿ, ಬಾಗಲಕೋಟೆ ಮತ್ತಿತರ ಜಿಲ್ಲಾಗಳಲ್ಲಿ ವ್ಯಾಪಕವಾಗಿ ದ್ರಾಕ್ಷಿ ಬೆಳೆಯಲಾಗುತ್ತಿದೆ. ಅಂದಾಜು 3ರಿಂದ 4 ಸಾವಿರ ಕೋಟಿ ರೂ. ವಹಿವಾಟು ನಡೆಯುತ್ತದೆ. ಇವೆಲ್ಲವೂ ಮಹಾರಾಷ್ಟ್ರಕ್ಕೆ ಹೋಗುವುದರಿಂದ ಆದಾಯವೂ ಆ ರಾಜ್ಯದ ಪಾಲಾಗುತ್ತಿದೆ. ನಮ್ಮ ರಾಜ್ಯಕ್ಕೆ […]