ತಿಪ್ಪರಲಾಗ ಹಾಕಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ : ಸಚಿವ ಮುನಿರತ್ನ

ಬೆಂಗಳೂರು,ಸೆ.19- ಕಾಂಗ್ರೆಸ್‍ನವರು ಏಕೆ ಕಿತ್ತಾಡುತ್ತಿದ್ದಾರೋ ಗೊತ್ತಿಲ್ಲ. ಜನರು ಅವರನ್ನು ತಿರಸ್ಕರಿಸಲಿದ್ದಾರೆ. ಅವರು ಏನೇ ಮಾಡಿದರೂ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದು ತೋಟಗಾರಿಕೆ ಸಚಿವ ಮುನಿರತ್ನ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018ರಲ್ಲಿ ಕಾಂಗ್ರೆಸ್‍ಗೆ ಎಷ್ಟು ಬಹುಮತ ಬಂದಿತ್ತು, ಅಂದು ಸಿದ್ದರಾಮಯ್ಯನವರೇ ಒಬ್ಬರೆ ಇದ್ದರಲ್ಲ ಅಂದು ಬಹುಮತ ಸಿಕ್ಕಿಲ್ಲ. ಮುಂದೇನೂ ಅವರು ಅಧಿಕಾರಕ್ಕೆ ಬರಲು ಸಾಧ್ಯನೇ ಇಲ್ಲ ಎಂದರು. 2023ರ ಚುನಾವಣೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್‍ನವರ ಯಾವ ತಂತ್ರಗಾರಿಕೆಯೂ ನಡೆಯುವುದಿಲ್ಲ ಎಂದು ಭವಿಷ್ಯ ನುಡಿದರು. ಅವರು […]